ನವದೆಹಲಿ: Rajnath Singh On Afghanistan Crisis - ಅಫ್ಘಾನಿಸ್ತಾನದ (Afghanistan) ಪ್ರಸ್ತುತ ಬೆಳವಣಿಗೆಗಳು ಭದ್ರತೆಯ ಹೊಸ ಸವಾಲುಗಳನ್ನು ಹುಟ್ಟುಹಾಕಿವೆ ಮತ್ತು ಕೇಂದ್ರ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಸೋಮವಾರ ಹೇಳಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಉತ್ತೇಜಿಸಲು ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಲಾಭ ಪಡೆಯಲು ಯಾವುದೇ ದೇಶ ವಿರೋಧಿ ಶಕ್ತಿಗೆ ಅವಕಾಶ ನೀಡಬಾರದು ಎಂದೂ ಅವರು ಹೇಳಿದ್ದಾರೆ.
We're constantly monitoring the situation in Afghanistan. Along with the security of Indians, we also want that by taking advantage of the situation there, anti-national forces shouldn't be able to encourage cross-border terrorism: Defense Minister Rajnath Singh pic.twitter.com/I8SEAPeduI
— ANI (@ANI) August 30, 2021
ನಮ್ಮ ಸರ್ಕಾರ ಅಲ್ಲಿನ ಪರಿಸ್ಥಿತಿ ಮೇಲೆ ನಿರಂತರವಾಗಿ ಅವಲೋಕಿಸುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ನಾವು ಪ್ರತಿಯೊಬ್ಬ ನಾಗರಿಕನನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುತ್ತೇವೆ ಎಂದಿದ್ದಾರೆ. ಇದಲ್ಲದೆ, ಕಾಶ್ಮೀರದ ಪರಿಸ್ಥಿತಿಯ ಕುರಿತು ಮಾತನಾಡಿರುವ ರಾಜನಾಥ್ ಸಿಂಗ್ ಅವರು ಕಾಶ್ಮೀರದಲ್ಲಿ ಉಳಿದಿರುವ ಭಯೋತ್ಪಾದನೆ (Terrorism) ಕೂಡ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಭದ್ರತೆ (National Security) ವಿಷಯಕ್ಕೆ ಸಂಬಂಧಿಸಿದಂತೆ ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ 3 ನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಿರುವ ತಮ್ಮ ಭಾಷಣದಲ್ಲಿ ಸಿಂಗ್, "ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಸವಾಲುಗಳನ್ನು ಹುಟ್ಟುಹಾಕುತ್ತಿದೆ ಮತ್ತು ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ-ಆಫ್ಘಾನಿಸ್ತಾನದ ಬಿಕ್ಕಟ್ಟಿನ ನಂತರ ಚುರುಕುಗೊಂಡ ಉಗ್ರರು, ಹೈಅಲರ್ಟ್ ಜಾರಿ
"ಭಾರತೀಯರ ಭದ್ರತೆಯ ಜೊತೆಗೆ, ದೇಶ ವಿರೋಧಿ ಶಕ್ತಿಗಳು ಅಲ್ಲಿನ ಬೆಳವಣಿಗೆಗಳ ಲಾಭವನ್ನು ಪಡೆಯುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಬಾರದು ಎಂದು ನಮ್ಮ ಸರ್ಕಾರ ಬಯಸುತ್ತದೆ. ನಾವು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಸವಾಲುಗಳನ್ನು ಎದುರಿಸುವ ಇತರ ಕೆಲವು ಆತಂಕಗಳನ್ನು ಹೊಂದಿದ್ದೇವೆ" ಎಂದು ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ-ಪ್ರಭು ಶ್ರೀರಾಮನಿಲ್ಲದೆ ಅಯೋಧ್ಯೆಯಲ್ಲಿ ಏನೂ ಇಲ್ಲ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು (PM Modi Government) ಸಂಪೂರ್ಣ ಎಚ್ಚರದಿಂದಿದ್ದು, ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಎಲ್ಲಾ ಪ್ರಮುಖ ನಗರಗಳನ್ನು ವಶಪಡಿಸಿಕೊಂಡ ನಂತರ ತಾಲಿಬಾನ್ ಆಗಸ್ಟ್ 15 ರಂದು ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿತ್ತು.
ಇದನ್ನೂ ಓದಿ-Viral Video : ಮದುವೆಗೆ ಬಂದ ಕುಟುಂಬಸ್ಥರು, ಸ್ನೇಹಿತರ ಮುಂದೆಯೇ ಹೊಡೆದಾಡಿಕೊಂಡ ವಧು ಮತ್ತು ಮೈದುನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ