Rajya Sabha Election: 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಮತದಾನ
Rajya Sabha Election: ಇಂದು ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ ರಾಜ್ಯಗಳಿಂದ 16 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಮತದಾನ ನಡೆಯಲಿದೆ.
ರಾಜ್ಯಸಭಾ ಚುನಾವಣೆ: ಇಂದು ಜೂನ್ 10ರಂದು ದೇಶದ ನಾಲ್ಕು ರಾಜ್ಯಗಳ 16 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಶುಕ್ರವಾರ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪಿಯೂಷ್ ಗೋಯಲ್, ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ರಣದೀಪ್ ಸುರ್ಜೆವಾಲಾ ಸೇರಿದಂತೆ ಪ್ರಮುಖ ನಾಯಕರು ಕಣದಲ್ಲಿದ್ದಾರೆ.
ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ - ನಾಲ್ಕು ರಾಜ್ಯಗಳ ಚುನಾವಣೆಗಳು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರಂತಹ ನಾಯಕರಿಗೆ ಅಗ್ನಿ ಪರೀಕ್ಷೆಯಾಗಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 244 ಸದಸ್ಯ ಬಲದ ಸದನದಲ್ಲಿ ಬಿಜೆಪಿ 121 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 70 ಮತ್ತು ಜೆಡಿಎಸ್ 32 ಶಾಸಕರನ್ನು ಹೊಂದಿದೆ. ಒಬ್ಬ ಅಭ್ಯರ್ಥಿ ಗೆಲುವಿಗೆ 45 ಮತಗಳ ಅಗತ್ಯವಿದೆ. ಕರ್ನಾಟಕದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲುತ್ತದೆ. ನಾಲ್ಕನೇ ಸ್ಥಾನಕ್ಕೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಇದನ್ನೂ ಓದಿ- ಕಾಂಗ್ರೆಸ್ ರಾಷ್ಟ್ರಪತಿ ಅಭ್ಯರ್ಥಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ!
ಕರ್ನಾಟಕದಿಂದ ಬಿಜೆಪಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಕರ್ನಾಟಕದ ಎಂಎಲ್‌ಸಿ ಲಹರ್ ಸಿಂಗ್ ಸಿರೋಯಾ ಅವರನ್ನು ಕಣಕ್ಕಿಳಿಸಿದೆ. ಎರಡನೇ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ನಮ್ಮ ಮೂರನೇ ಅಭ್ಯರ್ಥಿಯೂ ಗೆಲ್ಲುತ್ತಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದೆ. ಕಾಂಗ್ರೆಸ್ ಜಯರಾಂ ರಮೇಶ್ ಅವರನ್ನು ಮೊದಲ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಮಹಾರಾಷ್ಟ್ರದಲ್ಲಿ ಆರು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು :
ಮಹಾರಾಷ್ಟ್ರದಲ್ಲಿಯೂ ಸಹ ಖಾಲಿ ಇರುವ ಆರು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರೆ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 106 ಶಾಸಕರನ್ನು ಹೊಂದಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್, ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದೆ. ಮಹಾರಾಷ್ಟ್ರದಲ್ಲಿ ಒಬ್ಬ ನಾಮನಿರ್ದೇಶಿತ ಅಭ್ಯರ್ಥಿ ಗೆಲ್ಲಲು 42 ಮತಗಳ ಅಗತ್ಯವಿದೆ.
ರಾಜಸ್ಥಾನದಲ್ಲಿ, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣದಲ್ಲಿ:
ಒಬ್ಬ ನಾಮನಿರ್ದೇಶಿತ ಅಭ್ಯರ್ಥಿ ಗೆಲ್ಲಲು 41 ಮತಗಳ ಅಗತ್ಯವಿರುವ ರಾಜಸ್ಥಾನದಲ್ಲಿ, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 200 ಸ್ಥಾನಗಳ ಅಸೆಂಬ್ಲಿಯಲ್ಲಿ ಕಾಂಗ್ರೆಸ್ 108 ಶಾಸಕರನ್ನು ಮತ್ತು ಬಿಜೆಪಿ 71 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದೆ ಮತ್ತು ಬಿಜೆಪಿ ತನ್ನ ಶಾಸಕ ಘನಶ್ಯಾಮ್ ತಿವಾರಿ ಮತ್ತು ಸ್ವತಂತ್ರ ಅಭ್ಯರ್ಥಿ ಮತ್ತು ಮಾಧ್ಯಮ ಉದ್ಯಮಿ ಡಾ. ಸುಭಾಷ್ ಚಂದ್ರ ಅವರನ್ನು ಬೆಂಬಲಿಸಿದೆ. ಆದರೆ, ರಾಜ್ಯದಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ- Rajya Sabha Election: ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ
ಹರಿಯಾಣದಲ್ಲಿ, 90 ಸದಸ್ಯ ಬಲದ ವಿಧಾನಸಭೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು 31 ಸ್ಥಾನಗಳ ಅಗತ್ಯವಿದೆ. ಇಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 57 ಶಾಸಕರನ್ನು ಹೊಂದಿದ್ದು, ಮಾಜಿ ಸಚಿವ ಕೃಷ್ಣ ಲಾಲ್ ಪನ್ವಾರ್ ಅವರನ್ನು ಹೆಸರಿಸಿದೆ. ಇದು ಸ್ವತಂತ್ರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಅವರನ್ನು ಬೆಂಬಲಿಸುತ್ತದೆ. ಕಾಂಗ್ರೆಸ್ ಗೆ ಸರಿಯಾಗಿ 31 ಮತಗಳ ಬಲವಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ