Ram Mandir Trust: ರಾಮಮಂದಿರ ನಿರ್ಮಾಣಕ್ಕೆ ಮೂರೇ ದಿನದಲ್ಲಿ ₹ 100 ಕೋಟಿ ದೇಣಿಗೆ..!
ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ಭರ್ಜರಿಯಾಗಿ ದೇಣಿಗೆ ಹರಿದು ಬರಲಾರಂಭಿಸಿದೆ. ದೇಣಿಗೆ ಸಂಗ್ರಹ ಆರಂಭವಾದ ಮೂರೇ ದಿನಗಳಲ್ಲಿ ಅಂದಾಜು 100 ಕೋಟಿ ರು. ಹಣ ಸಂಗ್ರಹವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿರುವ ರಾಯ್ ‘ದೇಶದ ವಿವಿಧೆಡೆ ಸಂಗ್ರಹವಾದ ಹಣ ಇನ್ನೂ ಪೂರ್ಣ ಪ್ರಮಾಣದಲ್ಲಿ ಟ್ರಸ್ಟ್(Ram Mandir Trust)ನ ಕೇಂದ್ರ ಕಚೇರಿ ತಲುಪಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿ ಅನ್ವಯ ಈವರೆಗೆ 100 ಕೋಟಿ ರು. ಆಸುಪಾಸಿನಷ್ಟುಹಣ ಸಂಗ್ರಹವಾಗಿದೆ’ ಎಂದಿದ್ದಾರೆ.
Privacy Policy ಕಾರಣ WhatsAppಗೆ ಭಾರಿ ಹಾನಿ, ಬಳಕೆ ನಿಲ್ಲಿಸಿ ಎಂದ ದೆಹಲಿ HC
ಸಂಪೂರ್ಣವಾಗಿ ಭಕ್ತರ ದೇಣಿಗೆ ಹಣದಿಂದಲೇ ರಾಮಮಂದಿರ ದೇಗುಲ ಮತ್ತು ದೇಗುಲ ಸಂಕೀರ್ಣವನ್ನು ನಿರ್ಮಿಸುವ ಉದ್ದೇಶವನ್ನು ಟ್ರಸ್ಟ್ ಹೊಂದಿದೆ. ಇದಕ್ಕಾಗಿ ಸಂಕ್ರಾತಿ ದಿನವಾದ ಜ.14ರಿಂದ ಫೆ.27ರವರೆಗೆ ದೇಶವ್ಯಾಪಿ ದೇಣಿಗೆ ಸಂಗ್ರಹದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಮಮಂದಿರಕ್ಕೆ 300-400 ಕೋಟಿ ರು. ಮತ್ತು ಒಟ್ಟಾರೆ ರಾಮಮಂದಿರ ಸಂಕೀರ್ಣಕ್ಕೆ 1100 ಕೋಟಿ ರು. ವೆಚ್ಚವಾಗುವ ಸಾಧ್ಯತೆ ಇದೆ ಎಂದು ಟ್ರಸ್ಟ್ ಅಂದಾಜಿಸಿದೆ.
ಈ ಪ್ರಸಿದ್ದ ರಾಜಕಾರಣಿಗೆ ತಮ್ಮ ಮಡದಿಗೆ 'Kiss' ಮಾಡಲೂ ಭಯವಂತೆ, ಕಾರಣ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.