ನವೆಂಬರ್ನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ
ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ರಾಮ್ ದೇವಾಲಯದ ಪರವಾಗಿ ಹೊರಬೀಳಲಿದೆ ಎಂದು ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ನವೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಅಯೋಧ್ಯೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ಪ್ರಸ್ತುತ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಹಂತದಲ್ಲಿರುವ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ರಾಮ್ ದೇವಾಲಯದ ಪರವಾಗಿ ಹೊರಬೀಳಲಿದೆ ಎಂದು ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪೂಜಿಸುವ ಹಕ್ಕು ಮೂಲಭೂತ ಹಕ್ಕಾಗಿದೆ. ಇದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ರಾಮ ಹುಟ್ಟಿದ ಸ್ಥಳದಲ್ಲಿರುವ ದೇವಾಲಯವನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.