ನವದೆಹಲಿ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕರಾಗಿ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿದೆ. 


COMMERCIAL BREAK
SCROLL TO CONTINUE READING

ಛತ್ತೀಸ್ಘಡ ಮಾಜಿ ಮುಖ್ಯಮಂತ್ರಿ ರಮಣ ಸಿಂಗ್, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.


ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆಗೆ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈ ಮೂವರೂ ನಾಯಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಅಮಿತ್ ಷಾ ಈ ನಿರ್ಧಾರ ಕೈಗೊಂಡಿದ್ದಾರೆ. 


ಮಧ್ಯಪ್ರದೇಶದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರೂ ಸಹ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸುವಲ್ಲಿ ವಿಫಲವಾದ ಕಾರಣ ಶಿವರಾಜ್ ಸಿಂಗ್ ಚೌಹಾಣ್ ಅಧಿಕಾರದಿಂದ ಇಳಿಯಬೇಕಾಯಿತು. ಹೀಗಾಗಿ ಇದೀಗ ಬಿಜೆಪಿ ಈ ಮೂವರೂ ಮುಖ್ಯಮಂತ್ರಿಗಳನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.