Ration Card Rule Change: ಇನ್ಮುಂದೆ ಅನರ್ಹರು ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ಪಡೆಯಲು ಸಾಧ್ಯವಿಲ್ಲ

Ration Card Rule Change - ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯ (NFSA) ಲಾಭವನ್ನು ಪಡೆಯುತ್ತಿದ್ದಾರೆ. ಅನರ್ಹ ಜನರನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ವಿತರಣಾ ಸಚಿವಾಲಯವು ಮಾನದಂಡಗಳಲ್ಲಿ ಬದಲಾವಣೆಗಳನ್ನು ಮಾಡಲಿದೆ.

Written by - Nitin Tabib | Last Updated : Oct 18, 2021, 10:14 AM IST
  • ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಆಗಲಿವೆ.
  • ಅನರ್ಹರು ಕೂಡ ಪಡಿತರ ತೆಗೆದುಕೊಳ್ಳುತ್ತಿದ್ದಾರೆ ಎಂದು ದೇಶದ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿದ್ದವು.
  • ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಿದೆ.
Ration Card Rule Change: ಇನ್ಮುಂದೆ ಅನರ್ಹರು ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ಪಡೆಯಲು ಸಾಧ್ಯವಿಲ್ಲ title=
Ration Card Rule Change (File Photo)

Ration Card: ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಆಗಲಿವೆ. ಅನರ್ಹರು ಕೂಡ ಪಡಿತರ ತೆಗೆದುಕೊಳ್ಳುತ್ತಿದ್ದಾರೆ ಎಂದು ದೇಶದ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿದ್ದವು. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು  (Department of Food & Public Distribution) ಪಡಿತರ ಚೀಟಿಯ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಿದೆ.

ಹೊಸ ಬದಲಾವಣೆಗಳ ಮಾರ್ಗಸೂಚಿ ಬಹುತೇಕ ಸಿದ್ಧವಾಗಿದೆ. ಹೊಸ ಬದಲಾವಣೆಗಳ ಕುರಿತು ರಾಜ್ಯ ಸರ್ಕಾರಗಳೊಂದಿಗೆ ಹಲವಾರು ಸುತ್ತಿನ ಸಭೆಗಳನ್ನು ಸಹ ನಡೆಸಲಾಗಿದೆ. ಹೊಸ ನಿಬಂಧನೆಯಲ್ಲಿ ಏನೇನು ಇರಲಿದೆ ತಿಳಿಯೋಣ ಬನ್ನಿ.

ಹೊಸ ನಿಯಮ ಸಿಸ್ಟಂ ಅನ್ನು ಇನ್ನಷ್ಟು ಪಾರದರ್ಶಕವನ್ನಾಗಿಸಲಿದೆ
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನರು National Food Security Act (NFSA) ಲಾಭವನ್ನು ಪಡೆಯುತ್ತಿದ್ದಾರೆ. ಅವರಲ್ಲಿ ಆರ್ಥಿಕವಾಗಿ ಸಮೃದ್ಧವಾಗಿರುವ ಅನೇಕ ಜನರಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ವಿತರಣಾ ಸಚಿವಾಲಯವು ಮಾನದಂಡಗಳಲ್ಲಿ ಬದಲಾವಣೆಗಳನ್ನು ಮಾಡಲಿದೆ. ವಾಸ್ತವವಾಗಿ, ಈಗ ಹೊಸ ಮಾನದಂಡವನ್ನು ಸಂಪೂರ್ಣವಾಗಿ ಪಾರದರ್ಶಕಗೊಳಿಸಲಾಗುವುದು ಇದರಿಂದ ಯಾವುದೇ ಅವ್ಯವಸ್ಥೆ ಇರುವುದಿಲ್ಲ ಎನ್ನಲಾಗಿದೆ. 

ಈ ಬದಲಾವಣೆ ಯಾಕೆ?
ಈ ಕುರಿತು ಹೇಳಿಕೆ ನೀಡಿರುವ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ, ಈ ನಿಟ್ಟಿನಲ್ಲಿ,  ಕಳೆದ ಆರು ತಿಂಗಳಿನಿಂದ, ಮಾನದಂಡಗಳ ಬದಲಾವಣೆಗೆ ಸಂಬಂಧಿಸಿದಂತೆ ರಾಜ್ಯಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯಗಳು ನೀಡಿದ ಸಲಹೆಗಳನ್ನು ಸೇರಿಸಿಕೊಂಡು, ಅರ್ಹರಿಗೆ ಹೊಸ ಮಾನದಂಡಗಳನ್ನು ಸಿದ್ಧಪಡಿಸಲಾಗುತ್ತಿದೆ.

ಇದನ್ನೂ ಓದಿ-Ration Card : ಪಡಿತರ ಚೀಟಿದಾರರೇ ಗಮನಿಸಿ : ಈಗ ಆನ್‌ಲೈನ್‌ನಲ್ಲಿ ಲಭ್ಯವಿದೆ ಈ ಎಲ್ಲ ಹೊಸ ಸೇವೆಗಳು

ಈ ಮಾನದಂಡಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಹೊಸ ಮಾನದಂಡದ ಅನುಷ್ಠಾನದ ನಂತರ, ಅರ್ಹ ವ್ಯಕ್ತಿಗಳು ಮಾತ್ರ ಪ್ರಯೋಜನವನ್ನು ಪಡೆಯುತ್ತಾರೆ, ಅನರ್ಹರು ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನಿರ್ಗತಿಕರನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಲಾಗುತ್ತಿದೆ.

ಇದನ್ನೂ ಓದಿ-ಪಡಿತರ ಚೀಟಿದಾರರಿಗೆ ಪ್ರಮುಖ ಸುದ್ದಿ ! ಎಲ್ಲಿಯವರೆಗೆ ಸಿಗಲಿದೆ ಉಚಿತ ಪಡಿತರ ಸಂಪೂರ್ಣ ಮಾಹಿತಿ ಇಲ್ಲಿದೆ

ಒನ್ ನೇಶನ್ ಒನ್ ರೇಶನ್ ಕಾರ್ಡ್ ಯೋಜನೆ
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಡಿಸೆಂಬರ್ 2020  ರಿಂದ ಇದುವರೆಗೆ One Nation One Ration Card (ONORC) ದೇಶದ 32 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬಂದಿದೆ. ಸುಮಾರು 69 ಕೋಟಿ ಫಲಾನುಭವಿಗಳು ಅಂದರೆ NFSA ಅಡಿಯಲ್ಲಿ ಬರುವ ಶೇಕಡಾ 86 ರಷ್ಟು ಜನರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಪ್ರತಿ ತಿಂಗಳು ಸುಮಾರು 1.5 ಕೋಟಿ ಜನರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತೆರಳುವ ಮೂಲಕ ಈ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ-Ration Card : ಪಡಿತರ ಚೀಟಿದಾರರಿಗೆ ಬಿಗ್ ನ್ಯೂಸ್ : ಈಗ ತಕ್ಷಣವೇ ಆಗಲಿದೆ ಕಾರ್ಡ್‌ಗೆ ಸಂಬಂಧಿಸಿದ ಈ ಕೆಲಸಗಳು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News