close

News WrapGet Handpicked Stories from our editors directly to your mailbox

ಇಂದು ಪಾಟ್ನಾ ಸಾಹೀಬ್ ಕ್ಷೇತ್ರದಿಂದ ರವಿಶಂಕರ್ ಪ್ರಸಾದ್ ನಾಮಪತ್ರ ಸಲ್ಲಿಕೆ

ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ರವಿಶಂಕರ್ ಪ್ರಸಾದ್ ನಾಮಪತ್ರ ಸಲ್ಲಿಸಲಿದ್ದಾರೆ. 

Updated: Apr 26, 2019 , 11:04 AM IST
ಇಂದು ಪಾಟ್ನಾ ಸಾಹೀಬ್ ಕ್ಷೇತ್ರದಿಂದ ರವಿಶಂಕರ್ ಪ್ರಸಾದ್ ನಾಮಪತ್ರ ಸಲ್ಲಿಕೆ

ನವದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಬಿಹಾರದ ಪಾಟ್ನಾ ಸಾಹೀಬ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಬಗ್ಗೆ ಗುರುವಾರ ರಾತ್ರಿ ಟ್ವೀಟ್ ಮಾಡಿರುವ ರವಿಶಂಕರ್ ಪ್ರಸಾದ್, ನಾಮಪತ್ರ ಸಲ್ಲಿಸುವ ವಿವರಗಳನ್ನು ತಿಳಿಸಿ ಅತಿಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. 

"ನಾಳೆ(ಶುಕ್ರವಾರ) ನಾನು ಪಾಟ್ನಾ ಸಾಹೀಬ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ರೋಡ್ ಶೋ ಸಹ ನಡೆಸಲಿದ್ದು, ಪಾಟ್ನಾದ ಜನತೆ ಅತಿಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸಿ" ಎಂದು ಟ್ವೀಟ್ ಮಾಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ರವಿಶಂಕರ್ ಪ್ರಸಾದ್ ನಾಮಪತ್ರ ಸಲ್ಲಿಸಲಿದ್ದಾರೆ.