ಭೋಪಾಲ್: ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಪ್ರಮುಖ ಸುದ್ದಿ ಇದೆ. ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಪಂಚಾಯತಿ ರಾಜ್ (NIRDPR)ನಲ್ಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ career.nirdpr.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಅಧಿಸೂಚನೆಯ ಪ್ರಕಾರ ಈ ನೇಮಕಾತಿಯಡಿ 2 ವರ್ಷಗಳ ಕಾಲ ನೇಮಕಾತಿ ಇರುತ್ತದೆ. ಆದರೆ ಉತ್ತಮ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಅಥವಾ ಅಗತ್ಯಕ್ಕೆ ಅನುಗುಣವಾಗಿ ಅಧಿಕಾರಾವಧಿಯನ್ನು ವಿಸ್ತರಿಸಬಹುದು. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಈ ಕುರಿತಂತೆ ಹೆಚ್ಚಿನ ಮಾಹಿತಿ ಪರಿಶೀಲಿಸಬಹುದು.


ಶೈಕ್ಷಣಿಕ ಅರ್ಹತೆ:  
ರಾಜ್ಯ ಕಾರ್ಯಕ್ರಮ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಾಮಾಜಿಕ ವಿಜ್ಞಾನದಲ್ಲಿ ಪದವಿ ಹೊಂದಿರಬೇಕು. ಇದಲ್ಲದೆ ಅರ್ಜಿದಾರರು 10 ಮತ್ತು 12 ರಲ್ಲಿ ಕನಿಷ್ಠ 60 ಶೇಕಡಾ ಅಂಕಗಳನ್ನು ಹೊಂದಿರಬೇಕು.


JOB: RCFL ನಲ್ಲಿ 358 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!


ವಯಸ್ಸಿನ ಮಿತಿ:  
ಈ ಹುದ್ದೆ (Job)ಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರ ವಯಸ್ಸು 30 ವರ್ಷದಿಂದ 50 ವರ್ಷಗಳು ಆಗಿರಬೇಕು. ಇದಕ್ಕಿಂತ ಅಧಿಕ ವಯಸ್ಸಿನ ಅಭ್ಯರ್ಥಿಗಳು ನೇಮಕಾತಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.


ಕ್ಷೇತ್ರ ಅಧಿಕಾರಿ ಹುದ್ದೆಗಳಿಗೆ BECIL ನೇಮಕಾತಿ


ಅರ್ಜಿ ಸಲ್ಲಿಸುವುದು ಹೇಗೆ?
ಗ್ರಾಮೀಣಾಭಿವೃದ್ಧಿ (Rural development) / ಪಂಚಾಯತಿ ರಾಜ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಡಿಸೆಂಬರ್ 2020 ಆಗಿದೆ.