ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ: ಸಿಎಂ ಸಂತಾಪ

Pandit Rajeev Taranath passed away: ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜೀವ್ ತಾರಾನಾಥ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

Written by - Bhavishya Shetty | Last Updated : Jun 11, 2024, 08:59 PM IST
    • ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮೈಸೂರಿನ ಪಂಡಿತ್ ರಾಜೀವ್ ತಾರಾನಾಥ್ ನಿಧನ
    • ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್
    • ರಾಜೀವ್ ತಾರಾನಾಥ್ ಅಗಲಿಕೆಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ: ಸಿಎಂ ಸಂತಾಪ title=
Pandit Rajeev Taranath passed away

Pandit Rajeev Taranath passed away: ಖ್ಯಾತ ಸರೋದ್ ವಾದಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮೈಸೂರಿನ ಪಂಡಿತ್ ರಾಜೀವ್ ತಾರಾನಾಥ್ ಇಂದು ಸಂಜೆ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜೀವ್ ತಾರಾನಾಥ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ನಾಡಿನ ಹಾಗೂ ದೇಶದ ಪ್ರಮುಖ ಗೌರವಗಳಿಗೆ ರಾಜೀವ್ ಅವರು ಪಾತ್ರವಾಗಿದ್ದರು.

ಇದನ್ನೂ ಓದಿ: ನಿಂಬೆ ಜ್ಯೂಸ್ ಸೇವನೆಯಿಂದ ದೇಹಕ್ಕಿದೆ ಈ ಗಂಭೀರ ಹಾನಿ! ತಿಳಿದರೆ ಶಾಕ್ ಆಗುವಿರಿ

ಇನ್ನು ರಾಜೀವ್ ತಾರಾನಾಥ್ ಅಗಲಿಕೆಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, “ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಶಾಂತಿ ಕೋರಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸೂಪರ್ 8 ಪ್ರವೇಶಿಸಬೇಕೆಂದರೆ ಟೀಂ ಇಂಡಿಯಾ ಸಹಾಯ ಬೇಕೇಬೇಕು! ಹೇಗೆ ಗೊತ್ತಾ?

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News