ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್  2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. ಆದಾಗ್ಯೂ, 2,000 ರೂಪಾಯಿ ಮುಖಬೆಲೆಯ ಬ್ಯಾಂಕ್ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತದೆ ಎಂದು ಆರ್‌ಬಿಐ ಹೇಳಿದೆ.ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಸಮಯಕ್ಕೆ ಅನುಗುಣವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತು ಸಾರ್ವಜನಿಕ ಸದಸ್ಯರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳು ಸೆಪ್ಟೆಂಬರ್ 30, 2023 ರವರೆಗೆ ರೂ 2000 ಬ್ಯಾಂಕ್ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುತ್ತವೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.


ಇದನ್ನೂ ಓದಿ: RCB ಪ್ಲೇ-ಆಫ್ ಕನಸಿಗೆ ಟರ್ನಿಂಗ್ ಪಾಯಿಂಟ್ ನೀಡಿದ್ದು ಆ ‘ಬಾಲ್’!


ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಹೇಳಿದೆ.ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.


ಇದನ್ನೂ ಓದಿ: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಯಾರ ಕೈ ಹಿಡಿಯಲಿದೆ ಮಂತ್ರಿಗಿರಿ..?


500 ಮತ್ತು 1000 ರೂಪಾಯಿಗಳ ನೋಟುಗಳ ಅಮಾನ್ಯೀಕರಣದ ನಂತರ 8 ನವೆಂಬರ್ 2016 ರಂದು 2000-ರೂಪಾಯಿ ಬ್ಯಾಂಕ್ನೋಟನ್ನು ಆರ್‌ಬಿಐ ಬಿಡುಗಡೆ ಮಾಡಿತು. ಇದು 10 ನವೆಂಬರ್ 2016 ರಿಂದ ಚಲಾವಣೆಯಲ್ಲಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.