Ram Mandir Inauguration: ದೇಶದ ಬಹುತೇಕ ಮುಸ್ಲಿಂರು ಭಗವಾನ್ ರಾಮ ಎಲ್ಲರಿಗೂ ಸೇರಿದವರು ಎಂದು ನಂಬುತ್ತಾರೆ. ರಾಮ ಮಂದಿರದ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ ಎಸ್‌ ಎಸ್)-ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಹೇಳಿಕೆ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಈತನ ಫ್ರೆಂಡ್ಶಿಪ್ ನನಗೆ ಬೇಡ, ಅದು ಮುಗಿದ ಅಧ್ಯಾಯ”- ಕಿಚ್ಚನ ಮುಂದೆಯೇ ಸಂಗೀತ ಹೀಗಂದಿದ್ದು ಯಾರಿಗೆ ಗೊತ್ತಾ?


ಗುಜರಾತ್ ಮೂಲದ ಚಾರಿಟಬಲ್ ಟ್ರಸ್ಟ್‌’ನ ಸಹಯೋಗದೊಂದಿಗೆ ನಡೆಸಿದ ಸಮೀಕ್ಷೆಯ ಫಲಿತಾಂಶಗಳನ್ನು ಉಲ್ಲೇಖಿಸಿದ MRM, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು, ಇಸ್ಲಾಂ ಧರ್ಮದ ಹೆಸರಿನಲ್ಲಿ ರಾಜಕೀಯವಾಗಿ ಬೇಳೆ ಬೇಯಿಸಲು ಪ್ರಯತ್ನಿಸುತ್ತಿರುವ ಉಲೇಮಾಗಳು, ಮೌಲಾನಾಗಳು ಮತ್ತು ವಿರೋಧ ಪಕ್ಷದ ನಾಯಕರನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು ಎಂದಿದ್ದಾರೆ ಎಂದು ಹೇಳಿಕೊಂಡಿದೆ.


ಸಮೀಕ್ಷಾ ವರದಿಯನ್ನು ಉಲ್ಲೇಖಿಸಿ ಹಿರಿಯ ಆರ್‌ ಎಸ್‌ ಎಸ್ ನಾಯಕ ಇಂದ್ರೇಶ್ ಕುಮಾರ್ ನೇತೃತ್ವದ ಎಂ ಆರ್‌ ಎಂ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಿಂದ ಶೇ.74ರಷ್ಟು ಮುಸ್ಲಿಮರು ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸಮೀಕ್ಷೆಯಲ್ಲಿ ಶೇ.72ರಷ್ಟು ಮುಸ್ಲಿಮರು ಬಹಿರಂಗವಾಗಿ ಮೋದಿ ಸರ್ಕಾರದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಲ್ಲದೆ, ಈ ಸಮೀಕ್ಷೆಯಲ್ಲಿ, 26 ರಷ್ಟು ಮುಸ್ಲಿಮರು ಮೋದಿ ಸರ್ಕಾರದ ಮೇಲೆ ಯಾವುದೇ ವಿಶ್ವಾಸವನ್ನು ವ್ಯಕ್ತಪಡಿಸದ ಮತ್ತು ಧಾರ್ಮಿಕ ಮತಾಂಧತೆಯ ಆರೋಪವನ್ನು ಮಾಡಿದ್ದಾರೆ.


ಇದನ್ನೂ ಓದಿ: Tips For Cold: ಚಳಿಗಾಲದಲ್ಲಿ ನಿಮ್ಮ ತ್ವಚ್ಛೆಯನ್ನು ರಕ್ಷಿಸಲು ಸಲಹೆಗಳು


ಸಮೀಕ್ಷೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿ


ಆಯುರ್ವೇದ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಮ್ ಜಾನ್ ಸರ್ವೇಕ್ಷಣ್ ಅಡಿಯಲ್ಲಿ ದೆಹಲಿ-ಎನ್‌ ಸಿ ಆರ್, ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳ ಸುಮಾರು 10,000 ಮುಸ್ಲಿಂರು ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.