ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕು ತಂದ ಮಾಜಿ ಪೋಲಿಸ್ ಅಧಿಕಾರಿ ಪತ್ರ..!

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪದ ನಂತರ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಿದೆ.ಮೈತ್ರಿಕೂಟದ ಉನ್ನತ ಮುಖಂಡರು ದೇಶ್ಮುಖ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪ ಗಂಭೀರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Last Updated : Mar 21, 2021, 03:37 PM IST
ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕು ತಂದ ಮಾಜಿ ಪೋಲಿಸ್ ಅಧಿಕಾರಿ ಪತ್ರ..!  title=
file photo

ನವದೆಹಲಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪದ ನಂತರ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಿದೆ.ಮೈತ್ರಿಕೂಟದ ಉನ್ನತ ಮುಖಂಡರು ದೇಶ್ಮುಖ್ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪ ಗಂಭೀರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Coronavirus: ದೇಶದ ಈ ಭಾಗದಲ್ಲಿ ಮಾರ್ಚ್ 31ರವರೆಗೆ ಶಾಲಾ-ಕಾಲೇಜು ಬಂದ್, ನೈಟ್ ಕರ್ಫ್ಯೂ

'ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕಠಿಣ ನಿಲುವು ತೆಗೆದುಕೊಳ್ಳಲು ನಿರ್ಧರಿಸಿದ ನಂತರ ಈ ಪತ್ರ (ಪರಮ್ ಬಿರ್ ಸಿಂಗ್ ಅವರು ಮುಖ್ಯಮಂತ್ರಿಗೆ ಬರೆದ ಪತ್ರ) ಒಂದು ಪ್ರತಿಕ್ರಿಯೆಯಾಗಿದೆ. ಮಹಾರಾಷ್ಟ್ರ ಗೃಹ ಸಚಿವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ" ಎಂದು ಅವರು ಜಯಂತ್ ಪಾಟೀಲ್ ತಿಳಿಸಿದರು.ಶಿವಸೇನೆ ಮುಖಂಡರು ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಡುವೆ ಇಂದು ಸಂಜೆ ದೆಹಲಿಯಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ ಎಂದು ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: "ನಮಗೆ ಹಿಂದುತ್ವದ ಪಾಠ ಕಲಿಸಬೇಡಿ, ಅದಕ್ಕೆ ನೀವು ಅರ್ಹರಲ್ಲ"

ಆದರೆ ಈಗ ದೇಶ್ಮುಖ್ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಶ್ರೀ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.ಇನ್ನೊಂದೆಡೆಗೆ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ಆಗ್ರಹಿಸಿದೆ. "ನಾವು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತೇವೆ, ಅವರು ಹಾಗೆ ಮಾಡದಿದ್ದರೆ, ಮುಖ್ಯಮಂತ್ರಿ ಅವರನ್ನು ತೆಗೆದುಹಾಕಬೇಕು" ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ನಿಷ್ಪಕ್ಷಪಾತ ತನಿಖೆಗಾಗಿ ಕರೆ ನೀಡಿದ ಅವರು, "ಈ ಬಗ್ಗೆ ಮುಖ್ಯಮಂತ್ರಿಯನ್ನು ಮೊದಲೇ ತಿಳಿಸಲಾಗಿದೆ ಅವರು ಅದರ ಬಗ್ಗೆ ಏಕೆ ವರ್ತಿಸಲಿಲ್ಲ?" ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಈ ರಾಜ್ಯದಲ್ಲಿ ಸತತ ನಾಲ್ಕನೇ ದಿನ 8,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News