ನವದೆಹಲಿ: ಕ್ರಿಕೆಟಿಗ ರವೀಂದ್ರ ಜಡೇಜಾ ತಮ್ಮ ಪತ್ನಿ ರಿವಾಬಾ ಜಡೇಜಾ ಅವರು ಗುಜರಾತ್‌ನ ಜಾಮ್‌ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕ್ರಮಕ್ಕೆ ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೊದಲು ಸಾಥ್ ನೀಡಿದರು.


COMMERCIAL BREAK
SCROLL TO CONTINUE READING

"ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಅವರ ಪತ್ನಿ ಮತ್ತು ಬಿಜೆಪಿ ನಾಯಕಿ ರಿವಾಬಾ ಜಡೇಜಾ ಮುಂಬರುವ ಗುಜರಾತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೊದಲು ಜಾಮ್‌ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಿವಾಬಾ ಜಡೇಜಾ ಜಾಮ್‌ನಗರ ಉತ್ತರದಿಂದ ಸ್ಪರ್ಧಿಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ" ಎಂದು ಸುದ್ದಿ ಸಂಸ್ಥೆಎಎನ್ಐ ಹೇಳಿದೆ.


ಇದನ್ನೂ ಓದಿ : ಸರ್ಕಾರಿ ಶಾಲೆ ಏಕಲವ್ಯರು... ಹಿರಿಯರನ್ನು ನೋಡಿ ದೊಣ್ಣೆವರಸೆ ಕಲಿತ ವಿದ್ಯಾರ್ಥಿಗಳು..!


ವಿಧಾನಸಭೆ ಚುನಾವಣೆ 2023: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಕೊರತೆ!; ಕೈ ಪಾಲಯದ ತಂತ್ರ ಏನು?


ಕಳೆದ ವಾರ ಬಿಜೆಪಿ ಬಿಡುಗಡೆ ಮಾಡಿದ 160 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲ ರಿವಾಬಾ ಜಡೇಜಾ ಮತ್ತು ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಸ್ಥಾನ ಪಡೆದಿದ್ದಾರೆ. ರಿವಾಬಾ ಜಡೇಜಾ 2019 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು ಲೋಕಸಭೆ ಚುನಾವಣೆಗೆ ಮುನ್ನ ಜಾಮ್‌ನಗರ ಕ್ಷೇತ್ರದಿಂದ ಪಕ್ಷದ ಟಿಕೆಟ್ ಕೇಳಿದ್ದರು.


ಭಾನುವಾರದಂದು ಜಡೇಜಾ ಟ್ವಿಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿ ತಮ್ಮ ಪತ್ನಿಗೆ ಬೆಂಬಲ ನೀಡುವಂತೆ ಕರೆ ನೀಡಿದರು.ಗುಜರಾತಿ ಭಾಷೆಯಲ್ಲಿ ಮಾತನಾಡಿದ ಅವರು, "ನನ್ನ ಪ್ರೀತಿಯ ಜಾಮ್‌ನಗರ ನಿವಾಸಿಗಳು ಮತ್ತು ಎಲ್ಲಾ ಕ್ರಿಕೆಟ್ ಅಭಿಮಾನಿಗಳು. ನಿಮಗೆಲ್ಲರಿಗೂ ತಿಳಿದಿರುವಂತೆ ಇಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಯು ಟಿ20 ಕ್ರಿಕೆಟ್‌ನಂತೆ ವೇಗವಾಗಿ ನಡೆಯುತ್ತಿದೆ. ಬಿಜೆಪಿ ನನ್ನ ಪತ್ನಿ ರಿವಾಬಾ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.ಅವರು ನವೆಂಬರ್ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಗೆಲುವಿನ ವಾತಾವರಣ ನಿರ್ಮಿಸುವುದು ನಿಮ್ಮ ಜವಾಬ್ದಾರಿ. ಹಾಗಾಗಿ ನಾಳೆ ಬೆಳಿಗ್ಗೆ ಭೇಟಿಯಾಗೋಣ” ಎಂದು ಹೇಳಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.