ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಗುರುವಾರ (ಡಿಸೆಂಬರ್ 5) ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಅನೇಕ ಜನರು ಬಸ್‌ನಲ್ಲಿ ಸಿಲುಕಿಕೊಂಡಿದ್ದಾರೆ,  ಬಸ್‌ನಲ್ಲಿ ಸಿಕ್ಕಿಬಿದ್ದ ಜನರ ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ತಲುಪಿರುವ ಪೊಲೀಸರು  ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. 



COMMERCIAL BREAK
SCROLL TO CONTINUE READING

ಮಾಹಿತಿಯ ಪ್ರಕಾರ, ಬೆಳಗ್ಗೆ 6:00 ಗಂಟೆಗೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪ್ರಧಾನ್ ಟ್ರಾವೆಲ್ಸ್ ಬಸ್ ರೇವಾದಿಂದ ತೆರಳುವ ವೇಳೆ ಗುಧ್ ಬೈಪಾಸ್ ಬಳಿ ಮುಂಭಾಗದಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಬಸ್‌ನ ಮುಂಭಾಗ ಪೂರ್ಣ ಜಖಂ ಆಗಿದೆ. 


ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿ ಸಿಕ್ಕಿಬಿದ್ದ ಜನರನ್ನು ರಕ್ಷಿಸುವ ಕೆಲಸ ಭರದಿಂದ ಸಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಶಂಕಿಸಲಾಗಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್‌ಗಳಿಂದ ರೇವಾ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಮಾಹಿತಿಯ ಪ್ರಕಾರ, ಈ ಘಟನೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.