10 ಲಕ್ಷ ಉದ್ಯೋಗ ನೇಮಕಾತಿಗೆ ಅಕ್ಟೋಬರ್ 22ರಂದು ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು 10 ಲಕ್ಷ ಜನರನ್ನು ನೇಮಿಸಿಕೊಳ್ಳುವ 'ರೋಜ್ಗಾರ್ ಮೇಳ'ಕ್ಕೆ ಚಾಲನೆ ನೀಡಲಿದ್ದಾರೆ.

Written by - Zee Kannada News Desk | Last Updated : Oct 20, 2022, 04:16 PM IST
  • ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನಮಂತ್ರಿಯವರ ನಿರಂತರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
  • ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಭಾರತ ಸರ್ಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ಸಂಬಂಧಿಸಿವೆ.
  • ಸಮಾರಂಭದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಪಿಎಂಒ ಗುರುವಾರ ತಿಳಿಸಿದೆ.
10 ಲಕ್ಷ ಉದ್ಯೋಗ ನೇಮಕಾತಿಗೆ ಅಕ್ಟೋಬರ್ 22ರಂದು ಪ್ರಧಾನಿ ಮೋದಿ ಚಾಲನೆ  title=

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು 10 ಲಕ್ಷ ಜನರನ್ನು ನೇಮಿಸಿಕೊಳ್ಳುವ 'ರೋಜ್ಗಾರ್ ಮೇಳ'ಕ್ಕೆ ಚಾಲನೆ ನೀಡಲಿದ್ದಾರೆ.

ರೋಜ್‌ಗಾರ್ ಮೇಳವನ್ನು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಾರಂಭಿಸಲಿದ್ದಾರೆ ಮತ್ತು ಸಮಾರಂಭದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಪಿಎಂಒ ಗುರುವಾರ ತಿಳಿಸಿದೆ.

ಇದನ್ನೂ ಓದಿ : Benefits Of Green Peas: ಡಯಾಬಿಟಿಸ್, ಕೊಲೆಸ್ಟ್ರಾಲ್ ಕಾಯಿಲೆಗಳಿಗೆ ರಾಮಬಾಣ ಹಸಿರು ಬಟಾಣಿ

"ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನಮಂತ್ರಿಯವರ ನಿರಂತರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಪ್ರಧಾನಮಂತ್ರಿಗಳ ನಿರ್ದೇಶನದಂತೆ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿವೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : Benefits Of Jaggery: ಬಿಪಿಯಿಂದ ರಕ್ತಹೀನತೆಯವರೆಗೆ ಹಲವು ಸಮಸ್ಯೆಗಳ ನಿವಾರಣೆಗೆ ಬೆಲ್ಲವೇ ಮದ್ದು

ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಭಾರತ ಸರ್ಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ಸಂಬಂಧಿಸಿವೆ. ನೇಮಕಗೊಂಡವರು ವಿವಿಧ ಹಂತಗಳಲ್ಲಿ ಸರ್ಕಾರದ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಗ್ರೂಪ್ - ಎ, ಗ್ರೂಪ್ - ಬಿ (ಗೆಜೆಟೆಡ್), ಗ್ರೂಪ್ - ಬಿ (ನಾನ್ ಗೆಜೆಟೆಡ್) ಮತ್ತು ಗ್ರೂಪ್ - ಸಿ. ನೇಮಕಾತಿಗಳನ್ನು ಮಾಡಲಾಗುತ್ತಿರುವ ಹುದ್ದೆಗಳಲ್ಲಿ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ತನಿಖಾಧಿಕಾರಿಗಳು, ಹುದ್ದೆಗಳು ಇದರಲ್ಲಿ ಸೇರಿವೆ.

ಈ ನೇಮಕಾತಿಗಳನ್ನು ಮಿಷನ್ ಮೋಡ್‌ನಲ್ಲಿ ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ UPSC, SSC, ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡಲಾಗುತ್ತಿದೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಮತ್ತು ತಂತ್ರಜ್ಞಾನವನ್ನು ಸರಳಗೊಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News