ಕೇರಳ ಪ್ರವಾಹಕ್ಕೆ 100ಕೋಟಿ ರೂ. ಪರಿಹಾರ ಘೋಷಣೆ, 8 ಜಿಲ್ಲೆಗಳಲ್ಲಿ ಹೈ ಅಲರ್ಟ್
ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಂತ್ರಸ್ಥರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು.
ತಿರುವನಂತಪುರಂ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೇರಳ ರಾಜ್ಯದಲ್ಲಿ ಪ್ರವಾಹ ಎದುರಾಗಿದ್ದು, ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು 100 ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಕೇರಳ ಪ್ರವಾಸಕ್ಕೆ ಹೊರಟಿದ್ದೀರಾ? ಹಾಗಿದ್ದರೆ ಈ ವಿಷಯ ತಿಳಿಯುವುದು ಅಗತ್ಯ!
ಅತೀವ ಪ್ರವಾಹದಿಂದಾಗಿ ಕಳೆದ ಐದು ದಿನಗಳಲ್ಲಿ ಕೇರಳದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ರಾಜ್ಯದ 8 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಮಾರು 60 ಸಾವಿರಕ್ಕೂ ಹೆಚ್ಚು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.