ದೆಹಲಿ ವಿಮಾನ ನಿಲ್ದಾಣದಿಂದ 15 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

 ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಿಂದ ಉತ್ತಮ ಗುಣಮಟ್ಟದ ಹೆರಾಯಿನ್ ಮಾದಕ ದ್ರವ್ಯವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 15 ಕೋಟಿ ರೂ. ಎನ್ನಲಾಗಿದೆ. 

Last Updated : Sep 19, 2019, 09:02 PM IST
ದೆಹಲಿ ವಿಮಾನ ನಿಲ್ದಾಣದಿಂದ 15 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ title=

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಿಂದ ಉತ್ತಮ ಗುಣಮಟ್ಟದ ಹೆರಾಯಿನ್ ಮಾದಕ ದ್ರವ್ಯವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 15 ಕೋಟಿ ರೂ. ಎನ್ನಲಾಗಿದೆ. 

ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಮತ್ತು ಅಬಕಾರಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ಮೂಲಕ  ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈಗ ಹೆರಾಯಿನ್ ಕಳ್ಳಸಾಗಣೆ ಆರೋಪದ ಮೇಲೆ ಐವರು ಅಫ್ಘಾನಿಸ್ತಾನ ಪ್ರಜೆಗಳನ್ನು ಬಂಧಿಸಿದೆ. ಬಂಧಿತರೆಲ್ಲರೂ 18-29 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ. 

ಐವರು ಅಫಘಾನ್ ಪ್ರಜೆಗಳು ಐಜಿಐ ವಿಮಾನ ನಿಲ್ದಾಣಕ್ಕೆ ಕಂದಹಾರ್ ನಿಂದ ಕಾಬೂಲ್-ನವದೆಹಲಿ ವಿಮಾನದ ಮೂಲಕ ಆಗಮಿಸಿದ್ದರು. ಹೆರಾಯಿನ್ ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಜಂಟಿ ಕಾರ್ಯಾಚರಣೆಯನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ಯೋಜಿಸಿತ್ತು ಎನ್ನಲಾಗಿದೆ. ಸಂಪೂರ್ಣ ಪರಿಶೀಲನೆ ನಡೆಸಿದ ನಂತರ, ಕಸ್ಟಮ್ಸ್ ಅಧಿಕಾರಿಗಳು 370 ಗುಳಿಗೆ ಒಳಗೆ ಹೆರಾಯಿನ್ ನನ್ನು ಮರೆಮಾಡಲಾಗಿರುವುದನ್ನು ಎಂದು ಪತ್ತೆ ಹಚ್ಚಿದ್ದಾರೆ. ವಿಚಾರಣೆ ವೇಳೆ ಪತ್ತೆ ಹಚ್ಚುವುದನ್ನು ತಪ್ಪಿಸುವ ಸಲುವಾಗಿ ಬಂಧಿತರು ಕ್ಯಾಪ್ಸುಲ್‌ಗಳನ್ನು ನುಂಗುತ್ತಿದ್ದರು ಎನ್ನಲಾಗಿದೆ.

ಆರೋಪಿಗಳನ್ನು ಬಂಧಿಸಿದ ನಂತರ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ (ಆರ್‌ಎಂಎಲ್) ಕರೆದೊಯ್ಯಲಾಯಿತು, ಅಲ್ಲಿ ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅವರ ಹೊಟ್ಟೆಯಲ್ಲಿ ಕ್ಯಾಪ್ಸುಲ್ ಇರುವುದು ತಿಳಿದುಬಂದಿದೆ. ಹೆರಾಯಿನ್ ಹೊಂದಿರುವ 370 ಗುಳಿಗೆಗಳನ್ನು ಅವರ ಹೊಟ್ಟೆಯಿಂದ ವಶಪಡಿಸಿಕೊಳ್ಳಲಾಗಿದೆ.

ಅಫ್ಘಾನಿಸ್ತಾನದ ಕಂದಹಾರ್‌ನಿಂದ ಅಫಘಾನ್ ಪ್ರಜೆಯೊಬ್ಬರು ನವದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಎನ್‌ಸಿಬಿಗೆ ಮಾಹಿತಿ ಬಂದಿತು. 

 

Trending News