ನವದೆಹಲಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ನಡೆಸುವ ವಿಚಾರದಲ್ಲಿ ಯಾವುದೇ ಸಂಬಂಧವನ್ನು ಹೊಂದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಾಗಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ, ಸಿಎಂ ಹುದ್ದೆಯನ್ನು ಅಲಂಕರಿಸಲು ರಾಜ್ಯಕ್ಕೆ ಆಗಮಿಸಿರುವ ವಿಚಾರವನ್ನು ಅವರು ತಳ್ಳಿಹಾಕಿದರು. ದೇವೇಂದ್ರ ಫಡ್ನವಿಸ್ ಹೊಸ ಸರ್ಕಾರದ ಮುಖ್ಯಸ್ಥರಾಗಿರುತ್ತಾರೆ. ಮಹಾರಾಷ್ಟ್ರದಲ್ಲಿನ ಸರ್ಕಾರ ರಚನೆಯ ಮೇಲಿನ ಬಿಕ್ಕಟ್ಟನ್ನು ಪರಿಹರಿಸಲು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


ಆರ್ಎಸ್ಎಸ್ ಮುಖ್ಯಸ್ಥರನ್ನು ಸರ್ಕಾರ ರಚನೆ ವಿಚಾರವಾಗಿ ಜೋಡಿಸುವುದು ಸೂಕ್ತವಲ್ಲ, ನೂತನ ಸರ್ಕಾರ ರಚಿಸಲು ಬಿಜೆಪಿ ಮತ್ತು ಶಿವಸೇನೆಗೆ ಜನರು ಜನಾದೇಶ ನೀಡಿದ್ದಾರೆ ಎಂದು ಗಡ್ಕರಿ ಹೇಳಿದರು.