ಮುಂಬೈ : ಮುಂಬೈ ವಿಮಾನ ನಿಲ್ದಾಣ ಕೋವಿಡ್ -19 ಆರ್‌ಟಿ-ಪಿಸಿಆರ್ ಪರೀಕ್ಷೆ: ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಸಿಎಸ್‌ಎಂಐಎ) ಆರ್‌ಟಿ ಪಿಸಿಆರ್ ಪರೀಕ್ಷೆಯ (ಆರ್‌ಟಿ-ಪಿಸಿಆರ್ ಪರೀಕ್ಷೆ) ದರವನ್ನು ಶೇಕಡಾ 30 ರಷ್ಟು ಕಡಿಮೆ ಮಾಡಿ 600 ರೂಪಾಯಿಗೆ ಇಳಿಸಿದೆ. 


COMMERCIAL BREAK
SCROLL TO CONTINUE READING

ಮಹಾರಾಷ್ಟ್ರದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪಿಟಿಐ ಸುದ್ದಿಯ ಪ್ರಕಾರ, ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ಸೂಚನೆಗಳ ಪ್ರಕಾರ, ಪರಿಷ್ಕೃತ ಶುಲ್ಕ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ ಎಂದು ಸಿಎಸ್‌ಎಂಐಎ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.


ಹೊಸ ದರಗಳು ಏಪ್ರಿಲ್ 1 ರಿಂದ ಅನ್ವಯವಾಗುತ್ತವೆ:
ಮುಂಬೈ ವಿಮಾನ ನಿಲ್ದಾಣದಲ್ಲಿ (Mumbai Airport) ಕೋವಿಡ್ -19 (Covid 19) ಅನ್ನು ಪರೀಕ್ಷಿಸಲು ಬಯಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ (RT-PCR Test) ಈಗ ಏಪ್ರಿಲ್ 1 ರಿಂದ 850 ರೂ.ಗೆ ಬದಲಾಗಿ 600 ರೂ.ಗೆ ಲಭ್ಯವಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ. 


ಇದನ್ನೂ ಓದಿ - Sachin Tendulkar: ಕ್ರಿಕೆಟ್ ದಿಗಜ್ಜ 'ಸಚಿನ್‌ ತೆಂಡುಲ್ಕರ್' ಆಸ್ಪತ್ರೆಗೆ ದಾಖಲು!


ಆರ್‌ಟಿ-ಪಿಸಿಆರ್, ಕ್ಷಿಪ್ರ ಪ್ರತಿಜನಕ ಮತ್ತು ಪ್ರತಿಕಾಯ ಪರೀಕ್ಷೆಯ ದರವನ್ನು ಕಡಿತಗೊಳಿಸುವುದಾಗಿ ರಾಜ್ಯ ಸರ್ಕಾರ ಬುಧವಾರ ಪ್ರಕಟಿಸಿದೆ. ಇದರ ನಂತರ, ಆಸ್ಪತ್ರೆಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯ (RT-PCR Test) ಶುಲ್ಕ 600 ರೂ., ಇದು ಮೊದಲು 850 ರೂ. ಇತ್ತು ಕ್ಷಿಪ್ರ ಪ್ರತಿಜನಕದ ಶುಲ್ಕ 150 ರೂಪಾಯಿ ಆಗಿದೆ.


ಮೂರು ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳು ನಡೆದಿವೆ:
ಸಿಎಸ್‌ಎಂಐಎ ಸೆಪ್ಟೆಂಬರ್‌ನಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷಾ ಕೌಂಟರ್‌ಗಳನ್ನು ಸ್ಥಾಪಿಸಿತ್ತು ಮತ್ತು ಅಂದಿನಿಂದ ಮೂರು ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ. ಮುಂಬೈ ಸೇರಿದಂತೆ ಇಡೀ ಮಹಾರಾಷ್ಟ್ರದಲ್ಲಿ ಕರೋನಾ ಸೋಂಕು ಬಲವಾಗಿ ಹೆಚ್ಚಾಗಿದೆ. ಅನೇಕ ನಗರಗಳು ಮತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ಲಾಕ್‌ಡೌನ್ (Lockdown) ವಿಧಿಸಲಾಗಿದೆ.


ಇದನ್ನೂ ಓದಿ - ಒಂದೇ ದಿನದಲ್ಲಿ ಮುಂಬೈನಲ್ಲಿ 3,062 ಕೊರೊನಾ ಪ್ರಕರಣಗಳು ದಾಖಲು


ಮುಂಬೈನಲ್ಲಿ ಇದುವರೆಗೆ ಅತಿ ಹೆಚ್ಚು 8,832 ಕೊವಿಡ್ -19 ಪ್ರಕರಣಗಳು:
ಮುಂಬೈನಲ್ಲಿ ಶುಕ್ರವಾರ 8832 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಂದು ದಿನದಲ್ಲಿ ವರದಿಯಾಗಿರುವ ಅತಿ ಹೆಚ್ಚು ಪ್ರಕರಣ ಇದಾಗಿದೆ. ಇದರೊಂದಿಗೆ ಮುಂಬೈಯಲ್ಲಿ ಸೋಂಕಿತರ ಸಂಖ್ಯೆ 4,32,192 ಕ್ಕೆ ಏರಿಕೆಯಾಗಿದ್ದು, ಈವರೆಗೆ 11,724 ಜನರು ಸಾವನ್ನಪ್ಪಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.