ಮುಂಬೈ: ಗ್ರಾಸ್ ಡೊಮೆಸ್ಟಿಕ್ ಪ್ರಾಡೊಕ್ಟ್ (GDP) ಅತಾರ್ಥ್ ಒಟ್ಟು ರಾಷ್ಟ್ರೀಯ ಉತ್ಪನ್ನದ ಪ್ರಮಾಣ ಕಡಿಮೆಯಾದ ಬೆನ್ನಲ್ಲೇ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ ಮೌಲ್ಯ ಕೂಡ 04 ಪೈಸೆಯಷ್ಡು ಕುಸಿತ ಕಂಡಿದ್ದು, ಡಾಲರ್ ಎದುರು ರೂಪಾಯಿ ಈಗ 71.78ಕ್ಕೆ ಇಳಿದಿದೆ.


COMMERCIAL BREAK
SCROLL TO CONTINUE READING

ಆರ್ಥಿಕ ಹಿಂಜರಿತ ತಡೆಯಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದ್ದು, ತೆಗೆದುಕೊಂಡ ಎಲ್ಲಾ ಕ್ರಮಗಳ ಹೊರತಾಗಿಯೂ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಜಿಡಿಪಿ ದರ ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದರಿಂದ ವಿದೇಶಿ ಹೂಡಿಕೆದಾರರು ಎಚ್ಚರಿಕೆಯ ಹೆಜ್ಜೆ ಇಡಲು ಪ್ರಾರಂಭಿಸಿರುವುದರ ಪರಿಣಾಮ ರೂಪಾಯಿ ಮೌಲ್ಯದಲ್ಲೂ ಕುಸಿತವಾಗಿದೆ ಎಂದು ಹೇಳಲಾಗುತ್ತಿದೆ.