ನವದೆಹಲಿ: ರಷ್ಯಾ ದಾಳಿಯಿಂದ ನಲುಗುತ್ತಿರುವ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ(Operation Ganga) ನಡೆಯುತ್ತಿದೆ. ಭಾನುವಾರ(ಫೆ.27) ಬೆಳಗ್ಗೆ ಉಕ್ರೇನ್‌ನಲ್ಲಿ ಸಿಲುಕಿದ್ದ 250 ಭಾರತೀಯರನ್ನು ಹೊತ್ತ ಏರ್ ಇಂಡಿಯಾದ 2ನೇ ವಿಮಾನವು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿ ತಲುಪಿತು ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.


Air India)ದ 2ನೇ ಸ್ಥಳಾಂತರಿಸುವ ವಿಮಾನ ಭಾನುವಾರ ದೆಹಲಿ ತಲುಪಿದೆ. ಇದರಲ್ಲಿ 250 ಮಂದಿ ಮನೆಗೆ ಮರಳಿದ್ದಾರೆ. ಈ ವಿಮಾನವು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿತು. ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಇಂದು ಮತ್ತೊಂದು ವಿಮಾನ ದೆಹಲಿ ತಲುಪಬಹುದು ಎಂದು ನಿರೀಕ್ಷಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಗೊಂಡವರನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Ukraine Russia War: ವಿಶ್ವಸಂಸ್ಥೆಯಲ್ಲಿ ಭಾರತದ ನಡೆಯನ್ನು ಶ್ಲಾಘಿಸಿದ ರಷ್ಯಾ


ಶನಿವಾರ ಭಾರತಕ್ಕೆ ಆಗಮಿಸಿದ್ದ ಮೊದಲ ವಿಮಾನ


Russia Ukraine War: ಎಲ್ಲಾ ದಿಕ್ಕುಗಳಿಂದಲೂ ಉಕ್ರೇನ್ ನ್ನು ಆಕ್ರಮಿಸಿದ ರಷ್ಯಾ ಸೈನ್ಯ...!


ಉಕ್ರೇನ್ ಮೇಲಿನ ರಷ್ಯಾ ದಾಳಿ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಬಹುದೊಡ್ಡ ಹೇಳಿಕೆ ನೀಡಿದ್ದಾರೆ. ತನ್ನ ಅಧಿಕಾರಾವಧಿಯಲ್ಲಿ ರಷ್ಯಾ ಏನನ್ನೂ ಮಾಡಲು ಸಾಧ್ಯವಾಗಲಿಲ್ಲವೆಂದು ಟ್ರಂಪ್ ಹೇಳಿದ್ದಾರೆ. ಡೊನಾಲ್ಡ್ ಟ್ರಂಪ್ ಪ್ರಕಾರ, ಅವರು ಅಧ್ಯಕ್ಷರಾಗಿದ್ದಾಗ ಅಮೆರಿಕವು ತುಂಬಾ ಪ್ರಬಲವಾಗಿತ್ತು ಎಂದು ಹೇಳಿದ್ದಾರೆ.


ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸಭೆಯನ್ನು ಕರೆದಿದ್ದಾರೆ. ಫ್ರಾನ್ಸ್‌ನ ಉನ್ನತ ಅಧಿಕಾರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಕ್ಷಣಾ ಮಂಡಳಿಯ ಈ ಸಭೆ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ನಡೆಯಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.