ಶಬರಿಮಲೆ ವಿವಾದ: ವಿಸ್ತೃತ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ
ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶದ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರವಾಗಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ವಿಸ್ತೃತ ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.
ನವದೆಹಲಿ: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶದ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರವಾಗಿ ತೀರ್ಪು ನೀಡಿದ ಸುಪ್ರೀಂಕೋರ್ಟ್ ವಿಸ್ತೃತ ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದಾಗಿ ಹೇಳಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಎಲ್ಲಾ ವಯಸ್ಸಿನ ಮಹಿಳೆಯರನ್ನು ಶಬರಿಮಲೆಗೆ ಅನುಮತಿಸಬೇಕೆ ಎಂಬ ಪ್ರಶ್ನೆಯು ಒಂದು ದೊಡ್ಡ ಚರ್ಚೆಯ ಭಾಗವಾಗಿದೆ, ಇದರಲ್ಲಿ ಮುಸ್ಲಿಂ ಮತ್ತು ಪಾರ್ಸಿ ಮಹಿಳೆಯರಿಗೆ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತಹ ವಿಷಯಗಳೂ ಸೇರಿವೆ ಎಂದರು. ಅಲ್ಲದೆ ಈ ವಿಚಾರವಾಗಿ ಎಲ್ಲಾ ಪಕ್ಷಗಳಿಗೂ ಅವಕಾಶ ನೀಡಲಾಗುವುದು ಎಂದು ಸಿಜೆಐ ತಿಳಿಸಿದರು.
ಕಳೆದ ವರ್ಷ ಸುಪ್ರೀಂಕೋರ್ಟ್ ಸೆಪ್ಟೆಂಬರ್‌ನಲ್ಲಿ 10 ರಿಂದ 50 ವರ್ಷದೊಳಗಿನ ಮಹಿಳೆಯರು ಮತ್ತು ಬಾಲಕಿಯರ ಮೇಲೆ ಹೇರಿದ ಶತಮಾನಗಳಷ್ಟು ಹಳೆಯದಾದ ನಿಷೇಧವನ್ನು ಕೊನೆಗೊಳಿಸಿ ಕೇರಳದ ಶಬರಿಮಲೆದಲ್ಲಿರುವ ಪ್ರಸಿದ್ಧ ಅಯ್ಯಪ್ಪಾ ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರನ್ನು ಅನುಮತಿಸಬೇಕು ಎಂದು ಆದೇಶಿಸಿತ್ತು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಕೇರಳದಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ನಾಂದಿ ಹಾಡಿದ ನಂತರ 60 ಕ್ಕೂ ಹೆಚ್ಚು ಪುನರ್ ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಫೆಬ್ರವರಿ 6 ರಂದು ತೀರ್ಪನ್ನು ಮರುಪರಿಶೀಲಿಸುವಂತೆ ಬಯಸುವ ವಿವಿಧ ಪಕ್ಷಗಳ ವಿಚಾರಣೆಯ ನಂತರ ತನ್ನ ನಿರ್ಧಾರವನ್ನು ಕಾಯ್ದಿರಿಸಿತ್ತು.