ಅಯೋಧ್ಯೆ: 2024ರ ಜನವರಿ 22ರಂದು ರಾಮ್ ಲಾಲಾ ವಿಗ್ರಹದ ಪ್ರತಿಷ್ಠಾಪನೆ (ಪ್ರಾಣ ಪ್ರತಿಷ್ಠಾ ಸಮಾರಂಭ ಎಂದು ಕರೆಯಲಾಗುತ್ತದೆ) ಬಹುತೇಕ ಖಚಿತವಾಗಿದೆ. ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಖ್ಯಾತ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ.
ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.
ಭಾರತದ ಇತಿಹಾಸದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿರುವ ಈ ಐತಿಹಾಸಿಕ ದಿನವನ್ನು ಮತ್ತಷ್ಟು ವಿಶೇಷಗೊಳಿಸಲು ಐಕಾನಿಕ್ ಕ್ರಿಕೆಟ್ ಜೋಡಿಗಳಾದ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇವರನ್ನು ಹೊರತುಪಡಿಸಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಸುಮಾರು 8000 ಗಣ್ಯರನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ- Ayodhya Ram Mandir: ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಯಾವಾಗ? ಇಲ್ಲಿದೆ ಬಿಗ್ ಅಪ್ಡೇಟ್
8000 ಆಹ್ವಾನಿತರಲ್ಲಿ 6000 ದೇಶಾದ್ಯಂತದ ಧಾರ್ಮಿಕ ಮುಖಂಡರಿದ್ದರೆ, ಇತರ 2,000 ಗಣ್ಯರು ಕ್ರೀಡೆ, ಸಿನಿಮಾ, ಸಂಗೀತ, ವ್ಯಾಪಾರ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದವರು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದ್ದಾರೆ.
ಆಹ್ವಾನಿತರ ಪಟ್ಟಿಯಲ್ಲಿರುವ ಇತರ ಪ್ರಮುಖರೆಂದರೆ, ಖ್ಯಾತ ನಟರಾರ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ರತನ್ ಟಾಟಾ ಇತರರು.
ಇದನ್ನೂ ಓದಿ- Cyclone Michaung: ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ, ಚೆನ್ನೈನಲ್ಲಿ ಶಾಲೆಗಳಿಗೆ ರಜೆ
ವಿರಾಟ್ ಕೊಹ್ಲಿ ಸಮಾರಂಭಕ್ಕೆ ಬರಲು ಸಾಧ್ಯವೇ?
2024ರ ಜನವರಿ ಅಂತ್ಯದಲ್ಲಿ ತವರು ನೆಲದಲ್ಲೇ ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಮೂರು ದಿನಗಳ ನಂತರ ಈ ಸರಣಿಯ ಮೊದಲ ಪಂದ್ಯ ಜನವರಿ 25ರಂದು ಹೈದರಾಬಾದ್ನಲ್ಲಿ ನಡೆಯಲಿದೆ. ಹಾಗಾಗಿ, ವಿರಾಟ್ ಕೊಹ್ಲಿ ಬಿಡುವು ಮಾಡಿಕೊಂಡು ಈ ಸಮಾರಂಭಕ್ಕೆ ಆಗಮಿಸಿ, ನಂತರ ಪಂದ್ಯಕ್ಕಾಗಿ ಹೈದರಾಬಾದ್ಗೆ ಹಿಂತಿರುಗಬಹುದು. ಆದರೆ, ಸರಣಿಗಾಗಿ ಅಭ್ಯಾಸವೂ ಮುಖ್ಯವಾಗಿದ್ದು ಈ ಮಧ್ಯೆ ಕಿಂಗ್ ಕೊಹ್ಲಿ ಅಯೋಧ್ಯೆ ರಾಮಮಂದಿರಕ್ಕೆ ಬರುವ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.