ಸಲ್ಮಾನ್ ಜಾಮೀನು ಅರ್ಜಿ, ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪು ಶನಿವಾರ ಪ್ರಕಟಗೊಳ್ಳಲಿದೆ.
ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಜೋಧಪುರ ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದೆ.
20 ವರ್ಷದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಏಪ್ರಿಲ್ 5) ತೀರ್ಪು ಪ್ರಕಟ ಮಾಡಿದ್ದ ಜೋಧಪುರ ಸೆಷನ್ಸ್ ನ್ಯಾಯಾಲಯ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು. ತೀಪ್ರು ಹೊರಬಿದ್ದ ಬೆನ್ನಲ್ಲೇ ಸಲ್ಮಾನ್ ಖಾನ್ ಪರಾ ವಕೀಲರು ಜೋಧಪುರ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆ ಪೂರ್ಣಗೊಳಿಸಿದ್ದು, ನಾಳೆ ತೀರ್ಪು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಇನ್ನೂ ಒಂದು ದಿನ ಜೈಲಿನಲ್ಲಿ ಕಾಲ ಕಳೆಯಬೇಕಿದೆ. ನಾಳೆ ಬೆಳಿಗ್ಗೆ 10:30ಕ್ಕೆ ಸಲ್ಲುಗೆ ಬೇಲಾ? ಜೈಲಾ ಎಂಬ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.