ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ಏಪ್ರಿಲ್ 19ರಂದು ಮೇನ್ಪುರಿ ಕ್ಷೇತ್ರದಲ್ಲಿ ನಡೆದ ಎಸ್ಪಿ-ಬಿಎಸ್ಪಿ ಜಂಟಿ ಸಮಾವೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಭಾಗವಹಿಸಿದ್ದರು. 

Updated: Apr 26, 2019 , 03:24 PM IST
ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಲಕ್ನೋ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶುಕ್ರವಾರ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸದ್ಯ ಅವರನ್ನು ವೈದ್ಯರು ಪರೀಕ್ಷೆ ಮಾಡುತ್ತಿದ್ದು, ಕೆಲ ಗಂಟೆಗಳ ಬಳಿಕ ಡಿಸ್ಚಾರ್ಜ್ ಮಾಡುವ ಸಾಷ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. 

ಇತ್ತೀಚೆಗಷ್ಟೇ ಏಪ್ರಿಲ್ 19ರಂದು ಮೇನ್ಪುರಿ ಕ್ಷೇತ್ರದಲ್ಲಿ ನಡೆದ ಎಸ್ಪಿ-ಬಿಎಸ್ಪಿ ಜಂಟಿ ಸಮಾವೇಶದಲ್ಲಿ ಭಾಗವಹಿಸಿದ್ದ ಮುಲಾಯಂ ಸಿಂಗ್ ಯಾದವ್, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಶ್ಲಾಘಿಸಿದ್ದರು.