ಗುರಗಾಂವ್: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ವಿಧಿವಶರಾಗಿದ್ದಾರೆ. ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಮುಲಾಯಂ ಸಿಂಗ್ ಯಾದವ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU)ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಜೀವರಕ್ಷಕ ಔಷಧಿಗಳ ಮೇಲೆ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Viral Video: ಒಂದೆಡೆ ಮದುವೆ ನಡೆಯುತ್ತಿದೆ…ಇನ್ನೊಂದೆಡೆ ನಿದ್ದೆ ತಡೆಯಲಾಗದೆ ವಧು ಮಾಡಿದ್ದೇನು ನೋಡಿ…
Samajwadi Party supremo and former Uttar Pradesh CM Mulayam Singh Yadav passes away at the age of 82, confirms Akhilesh Yadav.
He was under treatment at Gurugram's Medanta hospital since last week. pic.twitter.com/qDYIuT5DcH
— ANI (@ANI) October 10, 2022
‘ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಇಂದು ಸಾಕಷ್ಟು ಗಂಭೀರವಾಗಿದೆ. ಅವರು ಜೀವರಕ್ಷಕ ಔಷಧಿಗಳ ಮೇಲೆ ಉಸಿರಾಡುತ್ತಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ತಜ್ಞ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ’ ಎಂದು ಆಸ್ಪತ್ರೆಯ ಆರೋಗ್ಯ ಬುಲೆಟಿನ್ ತಿಳಿಸಿತ್ತು.
ಮುಲಾಯಂ ಸಿಂಗ್ ಯಾದವ್ ಆಗಸ್ಟ್ 22ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಕ್ಟೋಬರ್ 2ರಂದು ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಜುಲೈನಲ್ಲಿ ಅವರು ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ: ಮೆದುಳು ನಿಷ್ಕ್ರಿಯಗೊಂಡಿದ್ದ ಬಿಎಸ್ಎಫ್ ಯೋಧನ ಅಂಗಾಗ ದಾನ
ಸಮಾಜವಾದಿ ಪಕ್ಷದ ಸ್ಥಾಪಕ ಮತ್ತು ಪೋಷಕರಾಗಿದ್ದ ಮುಲಾಯಂ ಸಿಂಗ್ ಯಾದವ್ ಸತತ 3 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.