ನವದೆಹಲಿ: ಪುರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಜಗನ್ನಾಥ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.


COMMERCIAL BREAK
SCROLL TO CONTINUE READING

ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಂಬಿತ್ ಪಾತ್ರಾ ಅವರು ಪುರಿಯ ಭಗವಾನ್ ಜಗನ್ನಾಥ ಪ್ರಧಾನಿ ಮೋದಿಯ ಭಕ್ತ ಎಂದು ಹೇಳುವುದನ್ನು ಕೇಳಬಹುದು. ಆದರೆ ವಿವಾದ ತಾರಕಕ್ಕೇರುತ್ತಿದ್ದಂತೆ ಸಂಬಿತ್ ಕ್ಷಮೆಯಾಚಿಸಿದ್ದು, ಬಾಯಿತಪ್ಪಿ ಈ ಹೇಳಿಕೆ ನೀಡಿರುವುದಾಗಿ ಅವರು ಸಮಜಾಯಿಸಿ ನೀಡಿದ್ದಾರೆ.


ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ


ಸೋಮವಾರದಂದು ಒಡಿಶಾದ ಪುರಿಯಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂಬಿತ್ ಪಾತ್ರಾ ಅವರು ಪುರಾತನ ನಗರದ ಪೂಜ್ಯ ದೇವರು ಜಗನ್ನಾಥ ಪ್ರಧಾನಿ ಮೋದಿಯ ಭಕ್ತ ಎಂದು ಹೇಳಿದ್ದರು. 
ಅವರ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂಬಿತ್ ಪಾತ್ರಾ ಹೇಳಿಕೆಯನ್ನು ಖಂಡಿಸಿದ್ದಾರೆ.


ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ


ಇನ್ನೂ ಮುಂದುವರೆದು " ಪುರಿ ಜಗನಾಥ್ ಒರಿಯಾದ ಅತಿ ದೊಡ್ಡ ಅಸ್ಮಿತೆಯಾಗಿದೆ.ನಾನು ಈ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಯಾವುದೇ ರಾಜಕೀಯ ಚರ್ಚೆಯಲ್ಲಿ ದೇವರನ್ನು ಸೇರಿಸಬೇಡಿ ಎಂದು ಬಿಜೆಪಿಗೆ ಮನವಿ ಮಾಡುತ್ತೇನೆ. ಇದನ್ನು ಮಾಡುವ ಮೂಲಕ ನೀವು ಒಡಿಯಾ ಅಸ್ಮಿತೆಯನ್ನು ತೀವ್ರವಾಗಿ ನೋಯಿಸಿದ್ದೀರಿ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.