ಸಂಬೀತ್ ಪಾತ್ರ ಹೆಗಲಿಗೆ ಮತ್ತೊಂದು ಜವಾಬ್ದಾರಿ, ಉನ್ನತ ಹುದ್ದೆ ಅಲಂಕರಿಸಿದ ಬಿಜೆಪಿ ವಕ್ತಾರ
ಭಾರತೀಯ ಜನತಾ ಪಕ್ಷದ ವಕ್ತಾರ ಸಂಬಿತ್ ಪಾತ್ರ ಅವರನ್ನು ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಂಪುಟದ ನೇಮಕಾತಿ ಸಮಿತಿ ಬುಧವಾರ ನೇಮಕ ಮಾಡಿದೆ.
ನವದೆಹಲಿ : ಭಾರತೀಯ ಜನತಾ ಪಕ್ಷದ (BJP) ವಕ್ತಾರ ಸಂಬಿತ್ ಪಾತ್ರ (Sambit Patra) ಅವರನ್ನು ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಂಪುಟದ ನೇಮಕಾತಿ ಸಮಿತಿ ಬುಧವಾರ ನೇಮಕ ಮಾಡಿದೆ. ಅಧಿಕೃತ ಆದೇಶದ ಪ್ರಕಾರ, ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರ (SCC) ಹುದ್ದೆಯನ್ನು ಪ್ರತ್ಯೇಕಗೊಳಿಸಿ ಐಟಿಡಿಸಿ ಅಧ್ಯಕ್ಷರು ಮತ್ತು ಐಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂದು ಮಾಡುವ ಪ್ರವಾಸೋದ್ಯಮ ಸಚಿವಾಲಯದ ಪ್ರಸ್ತಾವನೆಗೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಒಪ್ಪಿಗೆ ಸೂಚಿಸಿದೆ.
ಎಲ್ಲಿಯವರೆಗೆ ಈ ಜವಾಬ್ದಾರಿ ?
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೆ, ಐಎಎಸ್ ಅಧಿಕಾರಿ ಜಿಕೆವಿ ರಾವ್ ವ್ಯವಸ್ಥಾಪಕ ನಿರ್ದೇಶಕ (MD) ಸ್ಥಾನದ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಪಾರ್ಟ್ ಟೈಮ್ ನಾನ್-ಎಕ್ಸಿಕ್ಯೂಟಿವ್ ಡೈರೆಕ್ಟರ್ ಮತ್ತು ಐಟಿಡಿಸಿ ಅಧ್ಯಕ್ಷರಾಗಿ ಡಾ. ಸಂಬಿತ್ ಪಾತ್ರಾ (Sambit Patra) ಅವರ ನೇಮಕವು ಅಧಿಕಾರವಹಿಸಿಕೊಂಡ ಮೂರು ವರ್ಷಗಳವರೆಗೆ ಅಥವಾ ಮುಂದಿನ ಆದೇಶದವರೆಗೆ, ಇರಲಿದೆ.
ಇದನ್ನೂ ಓದಿ : ಕೃಷಿ ಕಾನೂನುಗಳ ರದ್ದತಿಗೆ ರಾಷ್ಟ್ರಪತಿ ಅಂಗೀಕಾರ
ಚುನಾವಣೆಯಲ್ಲಿಯೂ ಸ್ಪರ್ದಿಸಿದ್ದ ಸಂಬಿತ್ ಪಾತ್ರಾ :
ಸಂಬಿತ್ ಪಾತ್ರಾ ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ವಕ್ತಾರರಾಗಿದ್ದಾರೆ. 2019 ರಲ್ಲಿ ಅವರು ಪುರಿ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದರು ಆದರೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ವೃತ್ತಿಯಲ್ಲಿ ವೈದ್ಯರಾಗಿದ್ದ ಪತ್ರಾ 1997 ರಲ್ಲಿ ಒಡಿಶಾದ ಸಂಬಲ್‌ಪುರದ ಬುರ್ಲಾದಲ್ಲಿರುವ VSS ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ MBBS ಪದವಿ ಪಡೆದಿದ್ದಾರೆ. ಅವರು 2011 ರಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡರು.
ಇದನ್ನೂ ಓದಿ : ನೀವು ಮುಂಬೈಗೆ ಪ್ರಯಾಣಿಸುತ್ತಿದ್ದೀರಾ? ಹಾಗಿದ್ದಲ್ಲಿ ಈ ದಾಖಲೆ ಕಡ್ಡಾಯವಾಗಿ ನಿಮ್ಮ ಬಳಿ ಇರಲೇಬೇಕು..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.