`ಸನಾತನ ಧರ್ಮ` ಟೀಕೆ : ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
Sanatana Dharma row : `ಸನಾತನ ಧರ್ಮ` ಕುರಿತು ಡಿಎಂಕೆ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಎಸ್ಸಿ ಉದಯನಿಧಿ ಸ್ಟಾಲಿನ್ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
SC to Udhayanidhi stalin : 'ಸನಾತನ ಧರ್ಮ' ಕುರಿತು ಹೇಳಿಕೆ ನೀಡಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ಭಾಷಣದಲ್ಲಿ 'ಸನಾತನ ಧರ್ಮ' ಕುರಿತು ಕೆಲವು ವಿವಾದಾತ್ಮಕ ಹೇಳಿಕೆ ನೀಡಿ ದೊಡ್ಡ ಗದ್ದಲವನ್ನು ಹುಟ್ಟುಹಾಕಿದರು. ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿ ಅದನ್ನು "ನಿರ್ಮೂಲನೆ" ಮಾಡಬೇಕೆಂದು ಹೇಳಿದರು.
ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಇಂಫಾಲ್ ಜಿಲ್ಲೆಯಲ್ಲಿ ಮತ್ತೆ ಕರ್ಪ್ಯೂ ಜಾರಿ
ಅಲ್ಲದೆ, ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ನಿರ್ಮೂಲನೆಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ನಿರ್ಮೂಲನೆ ಮಾಡಬೇಕು. ಹೀಗಾಗಿ ಅವುಗಳಂತಿರುವ ಸನಾತನವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.
ಡಿಎಂಕೆ ನಾಯಕನ ಹೇಳಿಕೆಯು ದೇಶಾದ್ಯಂತ ಆಕ್ರೋಶವನ್ನು ಉಂಟುಮಾಡಿತು. ಬಿಜೆಪಿ ಮತ್ತು ಹಿಂದೂ ಬಲಪಂಥೀಯ ಗುಂಪುಗಳು ಸ್ಟಾಲಿನ್ ಅವರ ಅಭಿಪ್ರಾಯಗಳಿಗೆ ದೂಷಿಸಿದವು. ಅದೇನೇ ಇದ್ದರೂ, ಸ್ಟಾಲಿನ್ ತನ್ನ ಸನಾತನ ಧರ್ಮ ವಿರುದ್ಧ ನೀಡಿದ್ದ ತಮ್ಮ ಹೇಳಿಕೆಯಿಂದ ಹಿಂದೆ ಸರಿಯಲಿಲ್ಲ, ಎದುರಿಸುವುದಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.