Sanjay raut on Ram Mandir : ಇನ್ನು ಕೆಲವೇ ದಿನಗಳಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೃಹತ್ ವ್ಯವಸ್ಥೆಯನ್ನು ಮಾಡುತ್ತಿವೆ. ಇನ್ನು ಇದೇ ವಿಚಾರವಾಗಿ ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತೊಮ್ಮೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ರಾಮಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದು ದೂರಿದ್ದಾರೆ.


COMMERCIAL BREAK
SCROLL TO CONTINUE READING

ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಕ್ಕೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ. ಜನವರಿ 17 ರಂದು ಬಲರಾಮನ ಮೂರ್ತಿ ಅಯೋಧ್ಯೆಗೆ ತಲುಪಲಿದೆ. ಅದೇ ದಿನ, ಸರಯೂ ನದಿಯ ನೀರನ್ನು ಕಲಶದಲ್ಲಿ ತೆಗೆದುಕೊಳ್ಳಲಾಗುತ್ತದೆ. ಜನವರಿ 18 ರಂದು ಗಣೇಶ ಪೂಜೆ ನಡೆಯಲಿದೆ. ಜನವರಿ 19 ರಂದು ಹೋಮ ನಡೆಯಲಿದೆ. ಜನವರಿ 20 ರಂದು ವಾಸ್ತು ಶಾಂತಿ ಹಾಗೂ 21 ರಂದು ರಾಮನ ಮೂರ್ತಿಗೆ ಅಭಿಷೇಕ ಜರುಗಲಿದೆ. 


ಇದನ್ನೂ ಓದಿ: Year Ender 2023 : ಗಡಿಜಿಲ್ಲೆ ಚಾಮರಾಜನಗರದಲ್ಲಿ ಏನೇನಾಯ್ತು ಈ ವರ್ಷ..?


ಈ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಯುಬಿಟಿ ಶಿವಸೇನೆ ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ. ಬಿಜೆಪಿ ಪಕ್ಷವು ರಾಮಮಂದಿರದ ಉದ್ಘಾಟನೆಯನ್ನು ಸ್ವಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿದೆ. ಶೀಘ್ರದಲ್ಲೇ ರಾಮನನ್ನು ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸುವುದು ಮಾತ್ರ ಉಳಿದಿದೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಶುದ್ಧತೆ ಇಲ್ಲ, ಕೇವಲ ರಾಜಕೀಯ ಉದ್ದೇಶ ತುಂಬಿದೆ ಎಂದು ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು. 


ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಮನನ್ನು ಲೋಕಸಭೆ ಅಭ್ಯರ್ಥಿ ಎಂದು ಘೋಷಿಸುವುದೊಂದೇ ಬಾಕಿ ಎಂದರು. ಸಂಜಯ್ ರಾವತ್ ಅವರು ಈ ಹಿಂದೆಯೂ ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಟೀಕೆ ಮಾಡಿದ್ದರು. ಈ ಸಮಾರಂಭಕ್ಕೂ ದೇಶಕ್ಕೂ ಯಾವುದೇ ಸಂಬಂಧವಿಲ್ಲ, ಇದು ಕೇವಲ ಬಿಜೆಪಿ ಕಾರ್ಯಕ್ರಮ ಎಂದು ಹೇಳಿದ್ದರು. ಬಿಜೆಪಿ ಕಾರ್ಯಕ್ರಮಗಳು ಮುಗಿದ ನಂತರವೇ ಉದ್ಧವ್ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.