ನವದೆಹಲಿ: ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಫಿಟ್ನೆಸ್ ವಿಷಯದಲ್ಲೂ ಅವರು ತುಂಬಾ ಕಾಳಜಿವಹಿಸುತ್ತಾರೆ. ಕೆಲ ದಿನಗಳ ಹಿಂದಷ್ಟೇ ಮಾಡೆಲಿಂಗ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್(Instagram Post)ನಲ್ಲಿ ತಮ್ಮ ಸೌಂದರ್ಯದ ಗುಟ್ಟನ್ನು ಬಹಿರಂಗಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಾರಾ ಈ ಪೋಸ್ಟ್ ಮಾಡಿದ್ದಾರೆ


ಸಾರಾ ತೆಂಡೂಲ್ಕರ್(Sara Tendulkar) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ. ಅವರು ಯಾವುದೋ ವಸ್ತುವಿನ ಜಾಹೀರಾತು ಮಾಡುತ್ತಿರುವುದು ಕಂಡುಬಂದಿದೆ. ಶೀರ್ಷಿಕೆಯಲ್ಲಿ ಬ್ಯೂಟಿ ಪ್ರಾಡಕ್ಟ್ ಬಗ್ಗೆ ಹೇಳಿಕೊಂಡಿದ್ದಾರೆ. ನಮ್ಮ ತ್ವಚೆಯ ಆರೈಕೆಗೆ ಏನು ಮಾಡಬೇಕು? ಎಂಬುದನ್ನು ಅವರು ತಿಳಿಸಿಕೊಟ್ಟಿದ್ದಾರೆ. ‘ಈ ಉತ್ಪನ್ನವು ಚರ್ಮವನ್ನು ಹೈಡ್ರೀಕರಿಸುವುದನ್ನು ತಡೆಯುತ್ತದೆ ಮತ್ತು ಹೊಳೆಯಲು ಸಹಾಯ ಮಾಡುತ್ತದೆ’ ಎಂದು ಸಾರಾ ಕ್ಯಾಪ್ಶನ್ ಬರೆದಿದ್ದಾರೆ. ‘ಇದು ನನ್ನ ಚರ್ಮವನ್ನು ಸಹ ರಕ್ಷಿಸುತ್ತದೆ’ ಎಂದು ಹೇಳಿರುವ ಸಾರಾ ಅವರ ಈ ಪೋಸ್ಟ್ ವೈರಲ್ ಆಗಿದೆ. ಅನೇಕ ಬಳಕೆದಾರರು ಕಾಮೆಂಟ್‌ಗಳಲ್ಲಿ ಅವರ ಸೌಂದರ್ಯವನ್ನು ಹೊಗಳಿದ್ದಾರೆ. ಈ ವಿಶೇಷ ಉತ್ಪನ್ನದಿಂದ ಅವರ ಚರ್ಮವು ಹೊಳೆಯುತ್ತದೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ಬ್ರೆಜಿಲ್ ನ ಪುಟ್ಬಾಲ್ ದಂತಕಥೆ ಪೀಲೆ ಆಸ್ಪತ್ರೆಯಿಂದ ಬಿಡುಗಡೆ


ಸಾರಾ ಸೌಂದರ್ಯದ ಬಗ್ಗೆ ಮೆಚ್ಚುಗೆ


'ಭಜ್ಜಿ ಸಂಪೂರ್ಣ ಮ್ಯಾಚ್ ವಿನ್ನರ್'- ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ


ಶುಭಮನ್ ಗಿಲ್-ಸಾರಾ ಡೇಟಿಂಗ್ ಬಗ್ಗೆ ಚರ್ಚೆ


ಇತ್ತೀಚೆಗೆ ಸಾರಾ ತೆಂಡೂಲ್ಕರ್ ಮತ್ತು ಕ್ರಿಕೆಟಿಗ ಶುಭಮನ್ ಗಿಲ್(Shubman Gill) ಅವರ ಡೇಟಿಂಗ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ ತಾನು ಇನ್ನೂ ಸಿಂಗಲ್ ಎಂದು ಗಿಲ್ ಕೆಲವು ದಿನಗಳ ಹಿಂದೆ ಹೇಳಿಕೊಂಡಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಜನರೊಂದಿಗೆ ಪ್ರಶ್ನೋತ್ತರ ಸೆಷನ್ ಮಾಡುವ ಮೂಲಕ ಗಿಲ್ ಅವರು ಸಿಂಗಲ್ ಆಗಿರುವ ಬಗ್ಗೆ ಹೇಳಿಕೊಂಡಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.