ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ಸಿಕ್ಕಿದೆ. ಚಿಕಿತ್ಸೆಗಾಗಿ ಸುಪ್ರೀಂ ಕೋರ್ಟ್ ಈ ಪರಿಹಾರ ನೀಡಿದೆ. ನ್ಯಾಯಾಲಯ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ. ಈ ವೇಳೆಯಲ್ಲಿ ಅವರು ತಮ್ಮ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಲು ಅನುಮತಿ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಅನಾರೋಗ್ಯದ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಅನುಮತಿ ಇಲ್ಲದೆ ದೆಹಲಿ ಬಿಡುವಂತಿಲ್ಲ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯದ ಈ ಆದೇಶ ಜುಲೈ 11ರವರೆಗೆ ಜಾರಿಯಲ್ಲಿರುತ್ತದೆ. ನ್ಯಾಯಾಲಯವು ಜುಲೈ 10 ರಂದು ಹೆಚ್ಚಿನ ವಿಚಾರಣೆ ನಡೆಸಲಿದೆ. ಅಷ್ಟರಲ್ಲಿ ಚಿಕಿತ್ಸೆಯ ವರದಿಯನ್ನು ನ್ಯಾಯಾಲಯಕ್ಕೆ  ಸಲಿಸಬೇಕಾಗುತ್ತದೆ. 


ಇದನ್ನೂ ಓದಿ :  ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ


ಶೌಚಾಲಯದಲ್ಲಿ  ಕುಸಿದು ಬಿದ್ದ ಸತ್ಯೇಂದ್ರ ಜೈನ್  : 
ತಿಹಾರ್ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರು ಗುರುವಾರ  ಶೌಚಾಲಯದಲ್ಲಿ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ಜೈನ್ ಅವರನ್ನು ಮೊದಲು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಉಸಿರಾಟದ ತೊಂದರೆಯಿಂದಾಗಿ ಅವರನ್ನು ನಂತರ ಲೋಕನಾಯಕ ಜಯಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದಾಗಿನಿಂದ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಜೈನ್ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜೈನ್ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ಶೌಚಾಲಯದಲ್ಲಿ ತಲೆಸುತ್ತಿ ಬಿದ್ದಿರುವುದಾಗಿ ಆಮ್ ಆದ್ಮಿ ಪಕ್ಷ ಹೇಳಿಕೆ ನೀಡಿದೆ. ಈ ಹಿಂದೆ ಕೂಡಾ  ಜೈನ್ ಶೌಚಾಲಯದಲ್ಲಿ ಬಿದ್ದು ಬೆನ್ನು ಮೂಳೆಗೆ ಗಂಭೀರ ಗಾಯವಾಗಿತ್ತು.


ಇದನ್ನೂ ಓದಿ :  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಸ್ಥಾನಗಳ ಬಗ್ಗೆ ಭವಿಷ್ಯ ನುಡಿದ ಅಮಿತ್ ಶಾ..!


ಜೈನ್ ಅವರು ತುಂಬಾ ದುರ್ಬಲರಾಗಿದ್ದು, ನಡೆಯುವುದು ಕೂಡಾ ಅವರಿಂದ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಧಾರ್ಮಿಕ ನಂಬಿಕೆಗಳ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್ ಜೈಲಿನಲ್ಲಿ ಕೇವಲ ಹಣ್ಣುಗಳು ಮತ್ತು ಹಸಿ ತರಕಾರಿಗಳನ್ನು ಮಾತ್ರ ಸೇವಿಸುತ್ತಿದ್ದರು ಎಂದು ಪಕ್ಷ ಹೇಳಿದೆ. ಜೈಲಿನಲ್ಲಿದ್ದಾಗ ಸತ್ಯೇಂದ್ರ ಜೈನ್ ಅವರ ತೂಕ 35 ಕೆಜಿಯಷ್ಟು  ಕಡಿಮೆಯಾಗಿದೆ. ಅನಾರೋಗ್ಯದ ಕಾರಣ ಜೈನ್ ಅವರನ್ನು ಸೋಮವಾರ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.