ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನನ್ನ ಅಣ್ಣನಂತೆ, ನಾವಿಬ್ಬರೂ ಸಹೋದರರು ಎಂದು ಸೌದಿ ಆರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಸೌದಿ ಆರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಸೌದಿ ದೊರೆ ನಾವಿಬ್ಬರೂ ಸಹೋದರರು, ಪ್ರಧಾನಿ ಮೋದಿ ನನ್ನ ಅಣ್ಣನಂತೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಒಂದು ದಿನದ ಪ್ರವಾಸಕ್ಕಾಗಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ಮೊದಲ ಬಾರಿಗೆ ಸೌದಿ ದೊರೆ ಸಲ್ಮಾನ್ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ರಾಷ್ಟ್ರಗಳ ನಡುವೆ ಇದೊಂದು ಹೊಸ ಅಧ್ಯಾಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ಸಂದೇಶ ರವಾನೆ:
ಪಾಕಿಸ್ತಾನ ಭಯೋತ್ಪಾದನೆಯ ವಿಷಯ ಭೇಟಿಯ ಪ್ರಮುಖ ಅಜೆಂಡಾ ಆಗಿದ್ದು, ಪುಲ್ವಾಮ ಉಗ್ರರ ದಾಳಿಯ ಪ್ರಾಯಶ್ಚಿತವಾಗಿ ಪಾಕಿಸ್ತಾನವನ್ನು ರಾಜತಾಂತ್ರಿಕವಾಗಿ ಪ್ರತ್ಯೇಕಿಸುವ ಕುರಿತು ಸೌದಿ ದೊರೆ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಅದೇ ಸಮಯದಲ್ಲಿ, ಉಭಯ ರಾಷ್ಟ್ರಗಳು ರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸುತ್ತವೆ. ಈ ವೇಳೆ ಭಯೋತಾದನೆ ವಿರುದ್ಧ ಗಟ್ಟಿ ಸಂದೇಶ ರವಾನಿಸುವ ಸಾಧ್ಯತೆಯಿದೆ.
ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ:
ಎರಡೂ ದೇಶಗಳ ನಿಯೋಗದ ಸಭೆ ಬುಧವಾರ ಹೈದರಾಬಾದ್ ಹೌಸ್ ನಲ್ಲಿ ನಡೆಯುತ್ತಿದೆ. ಸೌದಿ ದೊರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಭೋಜನ ಕೂಟ ಏರ್ಪಡಿಸಿದ್ದಾರೆ. ಎಂಬಿಎಸ್ ಎಂದೇ ಕರೆಸಿಕೊಳ್ಳುವ ಸೌದಿ ದೊರೆ ಭಾರತದಲ್ಲಿ ಹೂಡಿಕೆ ಸೇರಿದಂತೆ ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೇ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಟಿ.ಎಸ್.ತ್ರಿಮೂರ್ತಿ ಪ್ರಕಾರ, ಸೌದಿ ಅರೇಬಿಯಾ ಮತ್ತು ಸೌದಿ ಅರೇಬಿಯಾ ನಡುವಿನ ಹೂಡಿಕೆ, ಪ್ರವಾಸೋದ್ಯಮ, ವಸತಿ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಐದು ಒಪ್ಪಂದಗಳಿಗೆ ಸಹಿ ಮೊಹಮ್ಮದ್ ಬಿನ್ ಸಲ್ಮಾನ್ ಸಹಿ ಹಾಕಲಿದ್ದಾರೆ. ಈ ಪ್ರವಾಸವು ಇಂಡೋ-ಸೌದಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪರಿಚಯಿಸುತ್ತದೆ.