ನವದೆಹಲಿ: ಬಿಜೆಪಿ ಸಂಸದೆ ಸಾವಿತ್ರಿಬಾಯಿ ಪುಲೆ ಹಾಗೂ ಎಸ್ಪಿ ನಾಯಕ ರಾಕೇಶ್ ಸಚನ್ ಶನಿವಾರದಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಇವರಿಬ್ಬರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ಪಕ್ಷದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷಕ್ಕೆ ಸ್ವಾಗತಿಸಿದರು.ಬಿಜೆಪಿಯಲ್ಲಿನ ಪ್ರಮುಖ ದಲಿತ ನಾಯಕಿ ಸಾವಿತ್ರಿ ಬಾಯಿ ಫುಲೆ ಕಳೆದ ಒಂದು ವರ್ಷದಿಂದ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದರು ಅಲ್ಲದೆ ಇನ್ನು ಮುಂದುವರೆದು ಬಿಜೆಪಿಯನ್ನು ದಲಿತ ವಿರೋಧಿ ಪಕ್ಷ ಎಂದು ಟೀಕಿಸಿದ್ದರು.



ಸಮಾಜವಾದಿ ಪಕ್ಷ (ಎಸ್ಪಿ) ಪ್ರಮುಖ ಮುಖಂಡರಾದ, ರಾಕೇಶ್ ಸಚನ್ ಫತೇಪುರ್ ಕ್ಷೇತ್ರದ ಮಾಜಿ ಶಾಸಕರಾಗಿದ್ದವರು ಈಗ  ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈಗ ಈ ಇಬ್ಬರ ಸೇರ್ಪಡೆ ಹೆಚ್ಚಿನ ಬಲ ನೀಡಲಿದೆ ಎನ್ನಲಾಗಿದೆ.ಉತ್ತರ ಪ್ರದೇಶದಲ್ಲಿ ಮೂಲೆಗುಂಪಾಗಿದ್ದ ಕಾಂಗ್ರೆಸ್ ಪಕ್ಷ ಈಗ ಮತ್ತೆ ನೆಲೆ ಕಂಡುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ.ಸದ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸುವ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿ ಹಾಗೂ  ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿದೆ.