ಅಯೋಧ್ಯೆ ರಾಮಜನ್ಮಭೂಮಿ ವಿವಾದ: ಜನವರಿಗೆ ಅಂತಿಮ ವಿಚಾರಣೆ ಮುಂದೂಡಿದ ಸುಪ್ರೀಂ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನೂತನ ಪೀಠ ಈ ವಿವಾದದ ಅಂತಿಮ ಹಂತದ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

Last Updated : Oct 29, 2018, 12:15 PM IST
ಅಯೋಧ್ಯೆ ರಾಮಜನ್ಮಭೂಮಿ ವಿವಾದ: ಜನವರಿಗೆ ಅಂತಿಮ ವಿಚಾರಣೆ ಮುಂದೂಡಿದ ಸುಪ್ರೀಂ title=

ನವದೆಹಲಿ: ಇಂದಿನಿಂದ ಆರಂಭವಾಗಬೇಕಿದ್ದ ಅಯೋಧ್ಯೆ ರಾಮಜನ್ಮ ಭೂಮಿ-ಬಾಬರಿ ಮಸೀದಿ ಸ್ಥಳ ವಿವಾದದ ಅಂತಿಮ ಹಂತದ ವಿಚಾರಣೆಯನ್ನು 2019ರ ಜನವರಿ ಮೊದಲ ವಾರಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. 

ಕಳೆದ ಎರಡು ದಶಕಗಳಿಂದ ಹಿಂದೂ-ಮುಸ್ಲಿಮರ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಸ್ಥಳ ವಿವಾದದ ಅರ್ಜಿಗಳ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದಿನಿಂದ ಆರಂಭಿಸಬೇಕಿತ್ತು. ಆದರೆ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನೂತನ ಪೀಠ ಈ ವಿವಾದದ ಅಂತಿಮ ಹಂತದ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ.

2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಅಖರ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸಾಕಷ್ಟು ಮೇಲ್ಮನವಿಗಳು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮುರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠ ನಡೆಸಬೇಕಿತ್ತು. ಆದರೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದೆ.

Trending News