ನವ ದೆಹಲಿ: ಪ್ರಮುಖ ನ್ಯಾಯಾಧೀಶರು ನ್ಯಾಯಾಧೀಶರಿಗೆ ವಿತರಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ರೋಸ್ಟರ್ ವ್ಯವಸ್ಥೆಯನ್ನು ಜಾರಿಗೆ ತರುವ ಮಹತ್ವದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಗುರುವಾರ ತೆಗೆದುಕೊಂಡಿದೆ.


COMMERCIAL BREAK
SCROLL TO CONTINUE READING

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ದೀಪಕ್ ಮಿಶ್ರಾ ಅವರು ಫೆ.5ರಿಂದ ಮುಂದಿನ ಆದೇಶದವರೆಗೆ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಎಲ್ ಐ)ಯ ವಿಚಾರಣೆ ನಡೆಸಲಿದ್ದಾರೆ.
ಈ ಸಂಬಂಧ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೊರಡಿಸಿರುವ ಆದೇಶವನ್ನು ಸರ್ವೋಚ್ಛ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.


ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್‌. ರಂಜನ್‌ ಗೊಗೋಯ್‌, ಮದನ್‌ ಬಿ.ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಅವರು ಕಳೆದ ಜನವರಿ 12ರಂದು ಪತ್ರಿಕಾಗೋಷ್ಠಿ ನಡೆಸಿ, ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. 


ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಾಗಿಲ್ಲ. ಇದನ್ನು ತಕ್ಷಣವೇ ಸರಿಪಡಿಸಬೇಕಿದೆ. ಇಲ್ಲವಾದಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯೇ ಹದಗೆಡಲಿದೆ ಎಂದು ಎಚ್ಚರಿಸಿ ಇವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಪತ್ರ ಬರೆದಿದ್ದರು. ಆದರೆ ಪತ್ರ ಬರೆದರೂ ಮುಖ್ಯ ನ್ಯಾಯಮೂರ್ತಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಈ ನಾಲ್ವರು ಹಿರಿಯ ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿದ್ದರು.


ಈ ಹಿನ್ನೆಲೆಯಲ್ಲಿ ಭಿನಾಭಿಪ್ರಾಯ ನಿವಾರಣೆಗೆ ಅಗತ್ಯ ನಿರ್ಧಾರ ತೆಗೆದುಕೊಂಡಿರುವ ಸುಪ್ರೀಂ ಯಾವ ಯಾವ ಪ್ರಕರಣಗಳನ್ನು ಯಾರಿಗೆ ವಹಿಸಬೇಕು ಎಂಬ ಬಗ್ಗೆ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ತಂದಿದೆ.