ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದ ಬಿಜೆಪಿ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆ ಮೂಲಕ ಈಗ ಬಿಜೆಪಿ ಹಿನ್ನಡೆಯಾಗಿದೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಯಾವುದೇ ರೀತಿಯ ಸಭೆಗಳು, ರ್ಯಾಲಿಗಳನ್ನು ಹಮ್ಮಿಕೊಳ್ಳುವಂತಿಲ್ಲ, ಒಂದು ವೇಳೆ ಹಮ್ಮಿಕೊಳ್ಳಬೇಕಾದರೆ ರಾಜ್ಯ ಸರ್ಕಾರದಿಂದ ಒಪ್ಪಿಗೆ ಪಡೆಯಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.



ಮುಖ್ಯನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠ ಅರ್ಜಿ ವಿಚಾರಣೆಯನ್ನು ನಡೆಸಿತು,ವಿಚಾರಣೆ ವೇಳೆ ರಥಯಾತ್ರೆ ಪರಿಷ್ಕೃತ ವೇಳಾಪಟ್ಟಿಯ ಜೊತೆಗೆ ರಾಜ್ಯ ಸರ್ಕಾರದ ಒಪ್ಪಿಗೆಯನ್ನು ಸಲ್ಲಿಸಬೇಕೆಂದು ಅದು ತಿಳಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿ ಬಿಜೆಪಿ ರಥಯಾತ್ರೆ ಕುರಿತಾಗಿ ತಿಳಿಸಿದೆ.


ಈ ಹಿಂದೆ 'ಪ್ರಜಾಪ್ರಭುತ್ವವನ್ನು ಉಳಿಸಿ' ಎನ್ನುವ ರಥಯಾತ್ರೆಯನ್ನು ಎಲ್ಲ 42 ಸಂಸದೀಯ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತು, ಯಾವಾಗ ಈ ರ್ಯಾಲಿಗೆ ಅವಕಾಶವನ್ನು ನಿರಾಕರಿಸಲಾಯಿತು, ಆಗ ಸುಪ್ರೀಂಕೋರ್ಟ್ ಗೆ ಮೊರೆಹೋದ ಬಿಜೆಪಿ ಶಾಂತಿಯುತ ಯಾತ್ರೆಯನ್ನು ಹಮ್ಮಿಕೊಳ್ಳುವುದು ತಮ್ಮ ಮೂಲಭೂತ ಹಕ್ಕು ಎಂದು ತಿಳಿಸಿದೆ.