ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

Last Updated : Apr 30, 2019, 07:14 PM IST
ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ title=

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.

ಬಿಜೆಪಿ ಸಮಾವೇಶಗಳಲ್ಲಿ ಸೇನೆಯ ಬಗ್ಗೆ ಹೇಳಿಕೆಗಳನ್ನು ನೀಡುವುದು ಮತ್ತು ದ್ವೇಷಪೂರಿತ ಭಾಷಣ ಮಾಡುವ ಮೂಲಕ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಈ ಬಗ್ಗೆ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು.

ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ, ಈ ಕೂಡಲೇ ಪ್ರಧಾನಿ ಮೋದಿ, ಅಮಿತ್ ಷಾ ವಿರುದ್ಧ ದಾಖಲಾಗಿರುವ ದೂರುಗಳ ಬಗ್ಗೆ ಪರಿಶೀಲಿಸಿ ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
 

Trending News