ಹಿಜಾಬ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಕೋರ್ಟ್ ಹೇಳಿದ್ದೇನು ?
ಕರ್ನಾಟಕದ ಹಿಜಾಬ್ ವಿವಾದ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನವದೆಹಲಿ: ಕರ್ನಾಟಕದ ಹಿಜಾಬ್ ವಿವಾದ (Hijab Contraversy) ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಕರ್ನಾಟಕ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆಯನ್ನು ಗಮನಹರಿಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಹಿಜಾಬ್ ವಿವಾದ (Hijab Row) ಪ್ರಕರಣದ ಕುರಿತು, ಸರಿಯಾದ ಸಮಯ ಬಂದಾಗ ವಿಷಯವನ್ನು ಆಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೀಗ ಈ ವಿಷಯದ ವಿಚಾರಣೆ ರಾಜ್ಯ ಹೈಕೋರ್ಟ್‌ನಲ್ಲಿ (Karnataka High Court) ನಡೆಯುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಗಮನ ಹರಿಸುತ್ತಿರುವುದಾಗಿ ಹೇಳಿದೆ. ಹಿಜಾಬ್ ಪ್ರಕರಣದ ವಿಚಾರಣೆ ನಡೆಸಲು ಎರಡನೇ ಬಾರಿಗೆ, ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ಕದ ತಟ್ಟಿದ ಹಿಜಾಬ್ ವಿವಾದ ಪ್ರಕರಣ, ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ
ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ ಮಾಡದಂತೆ ನ್ಯಾಯಾಲಯ ಸೂಚಿಸಿದೆ. ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಹಿಜಾಬ್ ಪ್ರಕರಣವನ್ನು (Hijab Contraversy) ಧಾರ್ಮಿಕ ಮತ್ತು ರಾಜಕೀಯ ವಿಷಯವನ್ನಾಗಿ ಮಾಡದಂತೆ ಕೋರ್ಟ್ ಹೇಳಿದೆ.
ಹಿಜಾಬ್ ವಿವಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಜ್ಯ ಹೈ ಕೋರ್ಟ್ (Karnataka High Court), ಶಾಲೆಗಳನ್ನು ತೆರೆಯಬೇಕು ಮತ್ತು ಪ್ರಕರಣ ಇತ್ಯರ್ಥವಾಗುವವರೆಗೆ, ಶಾಲೆಗಳಲ್ಲಿ ಧಾರ್ಮಿಕ ಉಡುಗೆಯನ್ನು ನಿಷೇಧಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶವನ್ನು ನೀಡಿತ್ತು. ಕರ್ನಾಟಕ ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ, ಮುಸ್ಲಿಂ ವಿದ್ಯಾರ್ಥಿನಿಗಳ ಪರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ : 'ರಾಷ್ಟ್ರ ಧ್ವಜದ ಜಾಗದಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎನ್ನುವವರು ನಾಲಾಯಕ್ ಗಳು'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.