ನವದೆಹಲಿ: ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿ ರಾಜೀನಾಮೆ ನೀಡಿ, ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿರುವ ಬಂಡಾಯ ಶಾಸಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.


COMMERCIAL BREAK
SCROLL TO CONTINUE READING

ಬಂಡಾಯ ಶಾಸಕರ ರಾಜೀನಾಮೆ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿ ಬಗ್ಗೆ ಮಂಗಳವಾರ ಸುದೀರ್ಘ 3 ಗಂಟೆ 45 ನಿಮಿಷ ವಾದ-ಪ್ರತಿವಾದವನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಬುಧವಾರ ಬೆಳಿಗ್ಗೆ 10:30ಕ್ಕೆ ತೀರ್ಪನ್ನು ಪ್ರಕಟಿಸಲಿದೆ.


ಅತೃಪ್ತ ಶಾಸಕರ ರಾಜೀನಾಮೆ: ಸುಪ್ರೀಂಕೋರ್ಟ್​ನಲ್ಲಿ ನಡೆದ ವಾದ-ವಿವಾದದ ಸಂಪೂರ್ಣ ಮಾಹಿತಿ!


ಸುಪ್ರೀಂಕೋರ್ಟ್ ತೀರ್ಪು ಹೊರಬಂದ ಬಳಿಕ, ಪ್ರಕ್ಷಾಂತರ ಕಾಯ್ದೆಯಡಿ ಸದಸ್ಯತ್ವ ಕಳೆದುಕೊಳ್ಳುವ ಆತಂಕದಲ್ಲಿರುವ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ ಸೂಚನೆ ದೊರೆಯುವುದೇ ಅಥವಾ ಸಂಖ್ಯಾ ಬಲ ಕಳೆದುಕೊಂಡು ಅಲ್ಪಮತದತ್ತ ವಾಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಬಲ ದೊರೆಯುವುದೇ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ಲರ ಚಿತ್ತ ಇದೀಗ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ.