ನೀರವ್ ಮೋದಿ ವಿರುದ್ಧದ ಅರ್ಜಿ ವಿಚಾರಣೆ ಫೆ.23ಕ್ಕೆ-ಸುಪ್ರೀಂ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಮುಖ್ಯ ಆರೋಪಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿದ್ದು, ವಿಚಾರಣೆಯನ್ನು ಫೆ.23ಕ್ಕೆ ನಡೆಸಲಿದೆ.

Last Updated : Feb 20, 2018, 06:12 PM IST
ನೀರವ್ ಮೋದಿ ವಿರುದ್ಧದ ಅರ್ಜಿ ವಿಚಾರಣೆ ಫೆ.23ಕ್ಕೆ-ಸುಪ್ರೀಂ title=

ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಮುಖ್ಯ ಆರೋಪಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿದ್ದು, ವಿಚಾರಣೆಯನ್ನು ಫೆ.23ಕ್ಕೆ ನಡೆಸಲಿದೆ.

ವಕೀಲ ವಿನೀತ್ ಧಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ವಿಚಾರಣೆ ನಡೆಸಲಿದೆ. ಅಲ್ಲದೆ, 11300 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಧಂಡಾ ಅರ್ಜಿಯಲ್ಲಿ ಕೋರಿದ್ದಾರೆ. 

10 ಕೋಟಿ ರೂ.ಗಳಿಗೂ ಹೆಚ್ಚು ಸಾಲಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿರ್ದೇಶಿಸಲು ಅರ್ಜಿದಾರರು ಉನ್ನತ ನ್ಯಾಯಾಲಯವನ್ನು ಕೋರಿದ್ದಾರೆ. 

ಇದನ್ನೂ ಓದಿ : ಯಾರು ಈ ನಿರವ್ ಮೋದಿ ?

ನ್ಯಾಯಮೂರ್ತಿ ಮನೋಹರ್ ಲಾಲ್ ಶರ್ಮಾ ಅವರ ಬಳಿಕ ನ್ಯಾಯಾಲಯದಲ್ಲಿ ಬ್ಯಾಂಕ್ ವಂಚನೆ ಸಂಬಂಧ ದಾಖಲಾದ ಎರಡನೇ ಅರ್ಜಿ ಇದಾಗಿದೆ. 

Trending News