ಮುಂದಿನ 2 ದಿನ ಈ ಭಾಗಗಳಲ್ಲಿ ಬಿಡುವಿಲ್ಲದೆ ಸುರಿಯಲಿದೆ ಭಾರೀ ಮಳೆ: ಮಿಂಚು-ಗುಡುಗು ಸಹಿತ ಬಿರುಗಾಳಿಯ ಮುನ್ನೆಚ್ಚರಿಕೆ
Weather Update in India: ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್’ನಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಂಭವವಿದೆ. ಇನ್ನೊಂದೆಡೆ ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲೂ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆ ಬೀಳುವ ನಿರೀಕ್ಷೆಯಿದೆ.
Karnataka Rain Update: ನೈಋತ್ಯ ಮಾನ್ಸೂನ್ ಮಾರುತವು ಉತ್ತರ ಕರ್ನಾಟಕ, ದಕ್ಷಿಣ ತೆಲಂಗಾಣ, ಉತ್ತರ ಕರಾವಳಿ ಆಂಧ್ರಪ್ರದೇಶ, ಉತ್ತರ ಬಂಗಾಳ ಕೊಲ್ಲಿ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಾದು ಹೋಗುತ್ತಿದೆ. ಪರಿಣಾಮವಾಗಿ ಈ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಲೆಗ್ ಸ್ಪಿನ್ನರ್ ಸೇರಿ ತಂಡದ 5 ಸ್ಟಾರ್ ಕ್ರಿಕೆಟಿಗರಿಗೆ ತೀವ್ರ ಎದೆನೋವು-ಜ್ವರ
ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್’ನಲ್ಲಿ ವ್ಯಾಪಕವಾಗಿ ಮಳೆ ಬೀಳುವ ಸಂಭವವಿದೆ. ಇನ್ನೊಂದೆಡೆ ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲೂ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆ ಬೀಳುವ ನಿರೀಕ್ಷೆಯಿದೆ.
ಇನ್ನು ದಕ್ಷಿಣ ಭಾರತದ ಬಗ್ಗೆ ಮಾತನಾಡುವುದಾದರೆ, ಕೇರಳದ ಮಾಹೆ ಮತ್ತು ತಮಿಳುನಾಡಿನ ಮೇಲೆ ಪ್ರತ್ಯೇಕವಾದ ಭಾರೀ ಮಳೆ ಬೀಳಲಿದೆ. ಅಷ್ಟೇ ಅಲ್ಲದೆ ಬುಧವಾರದಂದು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ ದೇಶದ ಕೆಲ ಭಾಗಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ.
ಇನ್ನು ನಾಳೆ ಅಂದರೆ ಅಕ್ಟೋಬರ್ 18ರಂದು ಅಂಡಮಾನ್-ನಿಕೋಬಾರ್ ದ್ವೀಪಗಳು, ಕೇರಳದ ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಪಾಕ್ ವಿರುದ್ಧದ ಪಂದ್ಯದಲ್ಲಿ ಬಾಲ್’ಗೆ ಹೇಳಿದ ಮಂತ್ರ ಯಾವುದೆಂದು ಕೊನೆಗೂ ಬಾಯ್ಬಿಟ್ಟ ಹಾರ್ದಿಕ್!
ಇನ್ನು ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್, ಕೊಂಕಣ-ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಒಳನಾಡು ಕರ್ನಾಟಕದಲ್ಲೂ ವರುಣನ ಸಿಂಚನಾಗಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್