`ಸ್ಕೀಂ` ಎಂದರೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಎಂದರ್ಥವಲ್ಲ: ಸುಪ್ರೀಂಕೋರ್ಟ್
ಕರ್ನಾಟಕಕ್ಕೇ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್.
ನವದೆಹಲಿ: ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿಲ್ಲ. 'ಸ್ಕೀಂ' ಎಂದರೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಎಂದರ್ಥವಲ್ಲ ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಕರ್ನಾಟಕಕ್ಕೇ ಬಿಗ್ ರಿಲೀಫ್ ನೀಡಿದೆ.
ಕೇಂದ್ರದ ವಿರುದ್ಧ ತಮಿಳುನಾಡು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ, ಸ್ಕೀಂ ಎಂದರೆ ನಿರ್ವಹಣ ಮಂಡಳಿ ಎಂದು ಅರ್ಥವಲ್ಲ.ಜತೆಗೆ ಮಂಡಳಿ ರಚಿಸುವಂತೆಯೂ ಸೂಚಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಈ ಸ್ಪಷ್ಟನೆ ನೀಡಿದೆ. ಅಲ್ಲದೆ ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಏಪ್ರಿಲ್ 9ರಂದು ನಡೆಸುವುದಾಗಿ ತಿಳಿಸಿದೆ.