ಮುಂದಿನ ಏಳು ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ
Cyclone Alert: ಉತ್ತರ ಕರಾವಳಿ ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಇಂದು ಗುಡುಗು-ಮಿಂಚಿನಿಂದ ಕೂಡಿದಂತೆ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Heavy Rain School Colleges Holiday: ಇಂದು ದಕ್ಷಿಣ ಅಂಡಮಾನ್ ಬಳಿ ಮೇಲ್ಮೈ ಪರಿಚಲನೆ ಪರಿಣಾಮದಿಂದ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ವ್ಯವಸ್ಥೆ ರೂಪುಗೊಳ್ಳಲಿದೆ. ಇದರಿಂದಾಗಿ ಚಂಡಮಾರುತ ಬಲಗೊಳ್ಳುವ ಸಾಧ್ಯತೆ ಇದೆ. ಈ ಚಂಡಮಾರುತವು ನವೆಂಬರ್ 27ರ ವೇಳೆಗೆ ತಮಿಳುನಾಡು ಅಥವಾ ಆಂಧ್ರಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸ್ಥಳೀಯರು ಜಾಗರೂಕರಾಗಿರಬೇಕು ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಎಂ.ಡಿ. ಕೂರ್ಮನಾಥ್ ಎಚ್ಚರಿಕೆ ನೀಡಿದ್ದಾರೆ.
ಇದಲ್ಲದೆ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇಂದಿನಿಂದ (ನವೆಂಬರ್ 22) ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ - ನಿಮಗೆ ಗೊತ್ತೆ..? ಭಾರತದಲ್ಲಿ ಯಾವುದೇ ಕಾರಣಕ್ಕೂ ಈ 5 ಪುಸ್ತಕಗಳನ್ನು ಓದುವಂತಿಲ್ಲ..
ಲಭ್ಯವಿರುವ ಮಾಹಿತಿಯ ಪ್ರಕಾರ, ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳಾದ್ಯಂತ ನವೆಂಬರ್ 22 ರಿಂದ ನವೆಂಬರ್ 28ರವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್‌ನಲ್ಲಿ ಈಶಾನ್ಯ ಮಾನ್ಸೂನ್ ಆಗಮಿಸಿದಾಗಿನಿಂದ ತಮಿಳುನಾಡಿನ ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಮತ್ತು ಡೆಲ್ಟಾ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ತಮಿಳುನಾಡಿನ ಕೆಲವು ಭಾಗಗಳಲ್ಲಿ ಗುರುವಾರ (ನವೆಂಬರ್ 21) ಭಾರೀ ಮಳೆಯಿಂದಾಗಿ ಪ್ರವಾ ಪರಿಸ್ಥಿತಿ ನಿರ್ಮಾಣವಾಗಿದೆ. ತೂತುಕುಡಿ, ರಾಜಗೋಪಾಲ್ ನಗರ, ಪುಷ್ಪಾ ನಗರ, ರಾಜು ನಗರ, ಪೋಸ್ಟಲ್ ಟೆಲಿಗ್ರಾಂ ಕಾಲೋನಿ ಪ್ರದೇಶಗಳಲ್ಲಿ ಜಲಾವೃಟದಿಂದಾಗಿ ಜನರು ತತ್ತರಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ - ಸಿಬಿಎಸ್‌ಇ 12ನೇ ತರಗತಿ ಬೋರ್ಡ್ ಪರೀಕ್ಷೆ ಡೇಟ್‌ಶೀಟ್: ಇಲ್ಲಿದೆ ಸಂಪೂರ್ಣ ಪಟ್ಟಿ
ಮುಂದಿನ ದಿನಗಳಲ್ಲಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಪ್ರಮಾಣದ ಮಳೆ ಸಾಧ್ಯತೆ ಇರುವುದರಿಂದ ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ