School reopening : ಮಧ್ಯಪ್ರದೇಶದಲ್ಲಿ 1 ರಿಂದ 8ನೇ ತರಗತಿವರೆಗೆ  2021 ಮಾರ್ಚ್ 31 ರವರೆಗೆ ಶಾಲೆಗಳು ಮುಚ್ಚಲ್ಪಡುತ್ತವೆ. ಕೋವಿಡ್ 19 (Covid 19) ರ ಕಾರಣ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಮಾರ್ಚ್ 31 ರವರೆಗೆ ತರಗತಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಒಂದರಿಂದ ಎಂಟನೇ ತರಗತಿವರೆಗಿನ ಶಾಲೆಗಳನ್ನು 2021ರ ಮಾರ್ಚ್ 31ರವರೆಗೆ ಮುಚ್ಚಲಾಗುವುದು ಮತ್ತು ಮುಂದಿನ ಶೈಕ್ಷಣಿಕ ಅಧಿವೇಶನ 2021ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chauhan) ತಿಳಿಸಿದ್ದಾರೆ. 


ಕರೋನಾವೈರಸ್ ನಡುವೆಯೂ ಈ ರಾಜ್ಯದಲ್ಲಿ ಜನವರಿ 1ರಿಂದ ತೆರೆಯಲಿವೆ ಶಾಲೆಗಳು


ಈ ಆಧಾರದ ಮೇಲೆ 8ನೇ ತರಗತಿವರೆಗಿನ ಮಕ್ಕಳು ಉತ್ತೀರ್ಣ: 
1 ರಿಂದ VIII ತರಗತಿಗಳನ್ನು ಯೋಜನೆಯ ಕೆಲಸದ (Project Work) ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. 10 ಮತ್ತು 12 ನೇ ತರಗತಿಗೆ ಬೋರ್ಡ್ ಪರೀಕ್ಷೆಗಳು ನಡೆಯಲಿವೆ. ಅವರ ತರಗತಿಗಳು ಶೀಘ್ರದಲ್ಲೇ ಪ್ರಾರಂಭವಾಗುತ್ತವೆ. ತರಗತಿಗಳಲ್ಲಿ ಸಾಮಾಜಿಕ ದೂರ ಮತ್ತು ಇತರ ಮುನ್ನೆಚ್ಚರಿಕೆಗಳನ್ನು ಸಂಪೂರ್ಣವಾಗಿ ಅನುಸರಿಸಲಾಗುವುದು. 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ವಾರದಲ್ಲಿ ಒಂದೆರಡು ದಿನ ಶಾಲೆಗೆ ಕರೆಯಲಾಗುತ್ತದೆ ಎಂದು ಹೇಳಲಾಗಿದೆ.


ಸದ್ಯಕ್ಕೆ ಶಾಲೆ ಆರಂಭ ಇಲ್ಲ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ


ಶಿಕ್ಷಣ ಮಂಡಳಿ:
ಇಲ್ಲಿನ ಶಿಕ್ಷಣವನ್ನು ಉತ್ತಮಗೊಳಿಸಲು ಮಧ್ಯಪ್ರದೇಶದ (Madhya Pradesh) ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಬೇಕಾಗಿದೆ ಎಂದು ಮುಖ್ಯಮಂತ್ರಿ ಚೌಹಾಣ್ ಅಭಿಪ್ರಾಯಪಟ್ಟಿದ್ದಾರೆ. ನಾವು ಪ್ರತಿ ಸರ್ಕಾರಿ ಶಾಲೆಯನ್ನು ಸಮಾಜದ ಸಹಾಯದಿಂದ ಉನ್ನತಗೊಳಿಸಬೇಕು. ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಾರ್ಗದರ್ಶನಕ್ಕಾಗಿ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಬೇಕು. ದೇಶದ ಇತರ ರಾಜ್ಯಗಳ ಶಿಕ್ಷಣ ಮಂಡಳಿಗಳನ್ನು ಅಧ್ಯಯನ ಮಾಡುವ ಮೂಲಕ ರಾಜ್ಯದಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದವರು ತಿಳಿಸಿದರು.


ಇದೇ ವೇಳೆ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಿಧಿಸದಂತೆ ಮುಖ್ಯಮಂತ್ರಿ ತಾಕೀತು ಮಾಡಿದ್ದಾರೆ.