ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಇದುವರೆಗೆ ಸುಮಾರು ನೂರಕ್ಕೂ ಅಧಿಕ ರಾಜಕೀಯ ನಾಯಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  


COMMERCIAL BREAK
SCROLL TO CONTINUE READING

ಕಲಂ 370 ರ ಮೂಲಕ ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ವಾಪಸ್ ತೆಗೆದುಕೊಂಡಿರುವ ಹಿನ್ನಲೆಯಲ್ಲಿ ಈಗ ರಾಜಕೀಯ ನಾಯಕರು ಮತ್ತು ಕಾರ್ಯಕರ್ತರು ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಭದ್ರತಾ ಸಂಸ್ಥೆಗಳು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಅಧಿಕಾರಿಯೊಬ್ಬರು ಹೇಳುವಂತೆ, ಈವರೆಗೆ 100ಕ್ಕೂ ಹೆಚ್ಚು ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಕಣಿವೆಯಲ್ಲಿ ಬಂಧಿಸಲಾಗಿದೆ' ಎನ್ನಲಾಗಿದೆ. ಆದರೆ ಬಂಧಿತರ ವಿವರಗಳನ್ನು ಇದುವರೆಗೆ ಬಹಿರಂಗಪಡಿಸಿಲ್ಲ ಎನ್ನಲಾಗಿದೆ.


ಭಾನುವಾರ ರಾತ್ರಿಯಿಂದ ಗೃಹಬಂಧನದಲ್ಲಿದ್ದ ಮಾಜಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಸೋಮವಾರ ರಾತ್ರಿ ಬಂಧನದಲ್ಲಿಡಲಾಗಿತ್ತು, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ನಾಯಕರಾದ ಸಜ್ಜಾದ್ ಲೋನ್ ಮತ್ತು ಇಮ್ರಾನ್ ಅನ್ಸಾರಿ ಅವರನ್ನು ಸಹ ಬಂಧಿಸಲಾಗಿದೆ.


ಬಂಧಿತ ನಾಯಕರನ್ನು ಅವರ ಗುಪ್ಕರ್ ನಿವಾಸಗಳಿಂದ ಮೀಟರ್ ದೂರದಲ್ಲಿರುವ ಹರಿ ನಿವಾಸ್‌ನಲ್ಲಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಅವರ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ನ್ಯಾಯಾಧೀಶರು ಅವರ ಬಂಧನದ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಅವರು ಹೇಳಿದರು.


ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಸಂವಿಧಾನದ 370 ನೇ ವಿಧಿಗಳನ್ನು ರದ್ದುಪಡಿಸುವುದಾಗಿ ಕೇಂದ್ರ ಘೋಷಿಸಿದ ಕೆಲವೇ ಗಂಟೆಗಳ ನಂತರ ರಾಜಕೀಯ ನಾಯಕರನ್ನು ಬಂಧಿಸಲಾಗಿದೆ.