ಭಯೋತ್ಪಾದಕ ಸಂಘಟನೆ JeM ಬೆದರಿಕೆ ಬಳಿಕ ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

Jaipur Airport after threat of terror Attack: ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (Jaish-E-Mohammad) ಬೆದರಿಕೆಯನ್ನು ಅನುಸರಿಸಿ ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Last Updated : Sep 26, 2019, 10:02 AM IST
ಭಯೋತ್ಪಾದಕ ಸಂಘಟನೆ JeM ಬೆದರಿಕೆ ಬಳಿಕ ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ title=

ಜೈಪುರ: ಜೈಶ್-ಇ-ಮೊಹಮ್ಮದ್, ಭಯೋತ್ಪಾದಕ ಸಂಘಟನೆಯ ಬೆದರಿಕೆಯ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ವಿಮಾನ ನಿಲ್ದಾಣದ ಭದ್ರತಾ ಸಂಸ್ಥೆ ಸಿಐಎಸ್ಎಫ್ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಿದೆ. 

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯು ದೇಶದ 30 ನಗರಗಳಲ್ಲಿ ದೊಡ್ಡ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದೆ. ವಿಮಾನ ನಿಲ್ದಾಣಗಳನ್ನು ಸಹ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಜೈಪುರ ವಿಮಾನ ನಿಲ್ದಾಣವನ್ನು ಭಯೋತ್ಪಾದಕ ಸಂಘಟನೆಯೂ ಗುರಿಯಾಗಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಐಎಸ್ಎಫ್ ಭದ್ರತೆಯನ್ನು ಬಿಗಿಗೊಳಿಸುತ್ತಿದೆ ಮತ್ತು ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಭದ್ರತಾ ಸಿಬ್ಬಂದಿಯಿಂದ ಕೂಲಂಕಷವಾಗಿ ಪರಿಶೀಲಿಸಿದ ನಂತರ ಪ್ರವೇಶವನ್ನು ನೀಡಲಾಗುತ್ತಿದೆ.

ಅದೇ ಸಮಯದಲ್ಲಿ, ಪ್ರಯಾಣಿಕರ ಸಾಮಾನುಗಳ ಬಗ್ಗೆಯೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದ್ದು, ಶ್ವಾನ ದಳದಿಂದಲೂ ತನಿಖೆ ನಡೆಸಲಾಗುತ್ತಿದೆ. ಇದರಿಂದಾಗಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರೊಂದಿಗೆ ವಿಮಾನ ನಿಲ್ದಾಣದ ಹೊರಗೆ ಮತ್ತು ವಾಹನ ನಿಲುಗಡೆಗೆ ಎಲೆಕ್ಟ್ರಾನಿಕ್ ವಾಹನಗಳನ್ನು ಸಹ ಪರೀಕ್ಷಿಸಲಾಗುತ್ತಿದೆ.

Trending News