ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾದ ಕಾಕಪೋರಾ ಪ್ರದೇಶದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವಿನ ಮುಖಾಮುಖಿಯಲ್ಲಿ ಸೇನೆಯು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದ (Pulwama) ಕಾಕಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದವು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದೆ.
Three terrorists have been neutralized at a hideout in encounter in the Ghat mollah area of Kakapora. Yesterday, we had shared that there were four terrorists, on the basis of an arrest, we got further information about the other 3 as well: Vijay Kumar, IGP Kashmir pic.twitter.com/Kbqgp1BJdP
— ANI (@ANI) April 2, 2021
ಇದನ್ನೂ ಓದಿ - Assam Election 2021: ಬಿಜೆಪಿ ಶಾಸಕರ ಕಾರಿನೊಳಗೆ ಇವಿಎಂ, 4 ಅಧಿಕಾರಿಗಳು ಸಸ್ಪೆಂಡ್
ಇಂದು ಹತ್ಯೆಯಾಗಿರುವ ಭಯೋತ್ಪಾದಕರು ಬಿಜೆಪಿ (BJP) ನಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಶ್ರೇಣಿಯ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ - Indian Railways: ರೈಲು ಪ್ರಯಾಣದ ವೇಳೆ ಈ ತಪ್ಪುಗಳನ್ನು ಮಾಡಿದರೆ ಹುಷಾರ್
ಲಭ್ಯವಾಗಿರುವ ಮಾಹಿತಿಯ ಪ್ರಕಾರ ಗುರುವಾರ, ಶ್ರೀನಗರದಲ್ಲಿ ಬಿಜೆಪಿ ಮುಖಂಡ ಅನ್ವರ್ ಅಹ್ಮದ್ ಮೇಲೆ ಭಯೋತ್ಪಾದಕರು ಹಲ್ಲೆ ನಡೆಸಿದ್ದರು. ಈ ಭಯೋತ್ಪಾದಕರು ಲಷ್ಕರ್-ಎ-ತೈಬಾಗೆ ಸೇರಿದವರು ಎಂದು ಹೇಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.