ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ, ಉಗ್ರಗಾಮಿಗಳ ನಡುವೆ ಗುಂಡಿನ ದಾಳಿ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಶನಿವಾರ ಹೊಡೆದುರುಳಿಸಲಾಗಿದೆ. 


COMMERCIAL BREAK
SCROLL TO CONTINUE READING

ಪುಲ್ವಾಮಾದ ಅವಂತಿಪೋರಾದ ಪಂಜಾಂ ಗ್ರಾಮದ ಮನೆಯೊಂದರಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ದಾಳಿ ನಡೆಸಿದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೋಲಿಸರೂ ಫೈರಿಂಗ್ ಮಾಡಲು ಆರಂಭಿಸಿದ್ದಾರೆ. ಈ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಿದೆ. 


ಮೃತ ಉಗ್ರರಲ್ಲಿ ಒಬ್ಬನನ್ನು ಶೌಕತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಪಂಜಾಂ ನಿವಾಸಿ ಎನ್ನಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಮೂಲಗಳ ಪ್ರಕಾರ, ಹತ್ಯೆಯಾದ ಉಗ್ರರು ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದವರಾಗಿದ್ದಾರೆ.



ಇದಲ್ಲದೆ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನ ಡೆಹ್ರೂನಾ ಗ್ರಾಮದಲ್ಲಿ, ಭಯೋತ್ಪಾದಕರು ಮತ್ತು ಭದ್ರತಾ ಪಡೆಗನಡುವೆ ಗುಂಡಿನ ಕಾಳಗ ನಡೆದಿದೆ. ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿದ್ದು, ಭಯೋದ್ಪಾದಕರ ಹೆಡೆಮುರಿಕಟ್ಟಲು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.