ಪುಲವಾಮಾ ಎನ್ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ
ಶ್ರೀನಗರ್: ಜಮ್ಮು ಕಾಶ್ಮೀರದ ಪುಲವಾಮಾ ಜಿಲ್ಲೆಯಲ್ಲಿ ರಕ್ಷಣಾ ಸಿಬ್ಬಂಧಿಯು ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉಗ್ರಗಾಮಿಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ತುಮ್ನಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಎನ್ನಲಾಗಿದೆ ಈ ವೇಳೆ ಮೂವರು ಉಗ್ರರನ್ನು ಎನ್ಕೌಂಟರ್ ಮೂಲಕ ಹತ್ಯೆಗೈಯಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಡಿಜಿಪಿ ವೈದ್ಯ ಕೂಡ ಮೂರು ಭಯೋತ್ಪಾದಕರನ್ನು ಹತ್ಯೆಗೈದಿರುವ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಭಯೋತ್ಪಾದಕರು ಮನೆಯಲ್ಲಿ ಅಡಗಿ ಕುಳಿತುಕೊಂಡಿದ್ದರಿಂದ ಕಾರ್ಯಾಚರನೆಯಲ್ಲಿ ವಿಳಂಬವಾಯಿತು ಎಂದು ತಿಳಿದುಬಂದಿದೆ. ನಂತರ ಮನೆಯಲ್ಲಿದ್ದ ನಾಗರಿಕರನ್ನು ಖಾಲಿಮಾಡಿದ ನಂತರ ಪೊಲೀಸರು ಎನ್ಕೌಂಟರ್ ಮೂಲಕ ಉಗ್ರರನ್ನು ಹತ್ಯೆಗೈದಿದ್ದಾರೆ ಎನ್ನಲಾಗಿದೆ.
ಮೂರು ಭಯೋತ್ಪಾದಕರು ಅಪ್ಪಳಿಸಲ್ಪಟ್ಟರು ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಸ್ಥಳವನ್ನು ಗುರುತಿಸಲು ಸಮರ್ಥರಾಗಿದ್ದರು ಆದರೆ ಮನೆಯಲ್ಲಿ ನಾಗರಿಕರ ಉಪಸ್ಥಿತಿಯಿಂದ ಕಾರ್ಯಾಚರಣೆಯನ್ನು ವಿಳಂಬಗೊಳಿಸಬೇಕಾಯಿತು ಎಂದು ಅವರು ಹೇಳಿದರು. ಇದೆ ವೇಳೆ ಪೋಲಿಸರತ್ತ ಕಲ್ಲು ತೂರಾಟವು ಕೂಡ ನಡೆದಿದೆ ಆಗ ಪೊಲೀಸರು ಸಾರ್ವಜನಿಕರ ಮೇಲೆ ಪೆಲೆಟ್ ಗನ್ ಮೂಲಕ ದಾಳಿ ನಡೆಸಿದ್ದಾರೆ ಇದರಿಂದ ಅವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.